ಸುಭಾಷಿತ :

Tuesday, September 17 , 2019 6:55 AM

-->

ಕಾಶ್ಮೀರ ವಿವಾದ : ಮಧ್ಯಸ್ಥಿಕೆ ವಹಿಸುವಂತೆ ಭಾರತ ಮನವಿ ಮಾಡಿಕೊಂಡಿಲ್ಲ : ಅಮೆರಿಕ ಸ್ಪಷ್ಟನೆ


Saturday, August 24th, 2019 10:32 am

ವಾಷಿಂಗ್ಟನ್ : ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಇತ್ಯರ್ಥಪಡಿಸಲು ಮಧ್ಯಸ್ಥಿಕೆ ವಹಿಸುವಂತೆ ಅಮೆರಿಕವನ್ನು ಭಾರತ ಕೋರಿಕೊಂಡಿಲ್ಲ ಎಂದು ಅಮೆರಿಕದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲೂ ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕದ ಅಧಿಕಾರಿ, ಭಾರತ ಮತ್ತು ಪಾಕಿಸ್ತಾನದ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಇಮ್ರಾನ್ ಖಾನ್ ನಡುವೆ ಉತ್ತಮ ಬಾಂಧವ್ಯ ಇರುವ ಕಾರಣ, ಆ ಎರಡು ರಾಷ್ಟ್ರಗಳು ಬಯಸಿದರೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಟ್ರಂಪ್ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions