ಬಿಗ್ ಬ್ರೇಕಿಂಗ್ : 116 ದಿವಸಗಳ ಬಳಿಕ ಜೈಲಿನಿಂದ ಹೊರ ಬಂದ ನಲಪಾಡ್


Thursday, June 14th, 2018 7:36 pm

ಬೆಂಗಳೂರು:  ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಸೆರೆವಾಸ ಅನುಭವಿಸುತ್ತಿದ್ದ ಮೊಹಮದ್ ನಲಪಾಡ್‌ಗೆ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ  ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಇದೇ ವೇಳೆ ಜಾಮೀನು ಪಡೆದುಕೊಂಡಿದ್ದ ನಲಪಾಡ್ ಇಂದು ರಾತ್ರಿ 7:15 ಸುಮಾರಿಗೆ ಬೆಂಗಳೂರಿನ ಪರಪ್ಪನ ಆಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಿಂದ ಹೊರಬಂದಿದ್ದಾನೆ.

ಏನಿದು ಪ್ರಕರಣ?  ಬೆಂಗಳೂರಿನ ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ನಲಪಾಡ್‌ ಹಾಗೂ ಅವರ ಏಳು ಸಹಚರರು 2018ರ ಫೆಬ್ರುವರಿ 17ರಂದು ವಿದ್ವತ್‌ ಮೇಲೆ ಜಗ್, ಬಾಟಲಿ ಹಾಗೂ ಕಬ್ಬಿಣದ ರಿಂಗ್‌ಗಳಿಂದ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಫೆಬ್ರುವರಿ 19ರಂದು ನಲಪಾಡ್ ಅವರನ್ನು ಪೊಲೀಸರು ಬಂಧಿಸಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions