ಸುಭಾಷಿತ :

Saturday, October 19 , 2019 4:30 PM

ನಟ ಸೂರ್ಯ ಮನವಿಗೆ ಸ್ಪಂದಿಸಿ 200 ಜನರಿಗೆ `ಹೆಲ್ಮೆಟ್’ ನೀಡಲು ಮುಂದಾದ ಫ್ಯಾನ್ಸ್!


Monday, September 16th, 2019 11:22 am

ಚೆನ್ನೈ : ಕಾಲಿವುಡ್ ನಟ ಸೂರ್ಯ ಅವರು ತಮ್ಮ ಅಭಿಮಾನಿಗಳಲ್ಲಿ ತಮಿಳುನಾಡಿನ ಯಾವುದೇ ಭಾಗದಲ್ಲಿ ತಮ್ಮ ಕಟೌಟ್ ಅಥವಾ ಬ್ಯಾನರ್ ಹಾಕಬೇಡಿ, ದಯವಿಟ್ಟು ಆ ಹಣವನ್ನು ಶಾಲೆಗಳಿಗೆ ದಾನ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸೂರ್ಯ ಮಾಡಿದ ಮನವಿಗೆ ಸ್ಪಂದಿಸಿರುವ ಅವರ ಅಭಿಮಾನಿಗಳು ಸೂರ್ಯ ನಟನೆಯ ಕಾಪ್ಟನ್ ಚಿತ್ರದ ಬಿಡುಗಡೆಯ ದಿನ ಕಟೌಟ್ ಹಾಗೂ ಬ್ಯಾನರ್ ಹಾಕುವ ಬದಲು 200 ಜನರಿಗೆ ಹೆಲ್ಮೆಟ್ ನೀಡುವುದಾಗಿ ನಿರ್ಧರಿಸಿದ್ದಾರೆ.

ಶುಕ್ರವಾರ ಟೆಕ್ಕಿ ಶುಭಾಶ್ರೀ (23) ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಕ್ರಮವಾಗಿ ಹಾಕಲಾಗಿದ್ದ ಎಐಎಡಿಎಂಕೆಯ ಬ್ಯಾನರ್ ಆಕೆಯ ತಲೆಯ ಮೇಲೆ ಬಿದ್ದಿತ್ತು. ಪರಿಣಾಮ ಶುಭಾ ಶ್ರೀ ಗಾಯಗೊಂಡು ಕೆಳಗೆ ಬಿದ್ದಿದ್ದಳು. ಈ ವೇಳೆ ಹಿಂಬದಿಯಿಂದ ಬಂದ ಲಾರಿಯೊಂದು ಯುವತಿಯ ಮೇಲೆ ಹರಿದು ಹೋದ ಪರಿಣಾಮ ಸಾವನ್ನಪ್ಪಿದ್ದರು. ಹೀಗಾಗಿ ಸೂರ್ಯ ಅವರು ಬ್ಯಾನರ್ ಹಾಗೂ ಕಟೌಟ್ ಹಾಕದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions