ಸುಭಾಷಿತ :

Saturday, October 19 , 2019 4:34 PM

ಗೋವಾದಲ್ಲಿ ಬಿಜೆಪಿಗೆ ಬಿಗ್ ಶಾಕ್‌ ಶಾಕ್ : ಗೋವಾ ಫಾರ್ವರ್ಡ್‌ ಪಾರ್ಟಿಯಿಂದ ಬೆಂಬಲ ವಾಪಸ್ಸು


Sunday, July 14th, 2019 5:11 pm


ಪಣಜಿ : ಗೋವಾದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರಕಾರಕ್ಕೆ ಗೋವಾ ಫಾರ್ವರ್ಡ್‌ ಪಾರ್ಟಿ ನೀಡಿದ್ದ ಬೆಂಬಲವನ್ನು ವಾಪಸ್ಸು ಪಡೆದುಕೊಂಡಿದೆ. ಈ ಬಗ್ಗೆ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರಿಗೆ ಗೋವಾ ಫಾರ್ವರ್ಡ್‌ ಪಾರ್ಟಿ ಅಧ್ಯಕ್ಷ ವಿಜಯ್ ಸರ್ದೇಸಾಯಿ ಬರೆದಿರುವ ಪತ್ರದಲ್ಲಿ ಬಿಜೆಪಿಗೆ ನೀಡಿರುವ ಬೆಂಬಲವನ್ನು ವಾಪಸ್ಸು ಪಡೆದುಕೊಳ್ಳಲಾಗಿದೆ ಅಂತ ಉಲ್ಲೇಖ ಮಾಡಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ 10 ಶಾಸಕರ ಪೈಕಿ ಮೂವರು ಸಂಪುಟ ಸಚಿವರಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆಯಲ್ಲಿ ಉಪಮುಖ್ಯಮಂತ್ರಿ ವಿಜಯ್ ಸರ್ದೇಸಾಯಿ, ಜಲಸಂಪನ್ಮೂಲ ಸಚಿವ ವಿನೋದ್ ಪಾಲ್ಯೇಕರ್, ಗ್ರಾಮೀಣಾಭಿವೃದ್ಧಿ ಸಚಿವ ಜಯೇಶ್ ಸಲಗಾಂವ್‌ಕರ್ ಮತ್ತು ಪಕ್ಷೇತರ ಶಾಸಕ ಮತ್ತು ಕಂದಾಯ ಸಚಿವ ರೋಹನ್ ಖಾವುಂಟೆ ಅವರು ಸ್ಥಾನ ಕಳೆದುಕೊಂಡಿದ್ದರು ಈ ಕಾರಣಕ್ಕಾಗಿ ಬೆಂಬಲವನ್ನು ವಾಪಸ್ಸು ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ.

ಸದ್ಯ 24 ವಿಧಾನಸಭಾ ಸೀಟುಗಳನ್ನು ಗೋವಾ ಹೊಂದಿದ್ದು, ಈ ಪೈಕಿ ಇಬ್ಬರ ನಿಧನದಿಂದ ಸದ್ಯ 22 ಮಂದಿ ಶಾಸಕರಿದ್ದು, ನಾಲ್ಕು ಮಂದಿ ಶಾಸಕರನ್ನು ಗೋವಾ ಫಾರ್ವರ್ಡ್‌ ಪಾರ್ಟಿ ಹೊಂದಿದೆ. ಸದ್ಯ ಮಟ್ಟಿಗೆ ಈ ನಾಲ್ವರು ಶಾಸಕರು ಬೆಂಬಲವನ್ನು ವಾಪಸ್ಸು ಪಡೆದುಕೊಂಡಿರುವುದರಿಂದ ಸರಕಾರಕ್ಕೆ ಯಾವುದೇ ತೊಂದರೆ ಉಂಟಾಗುವುದಿಲ್ಲ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions