ಸುಭಾಷಿತ :

Monday, September 23 , 2019 3:53 PM

ಲೋಕ ಫಲಿತಾಂಶಕ್ಕೂ ಮುನ್ನವೇ ಸಂಸದರಾದ ನಿಖಿಲ್! ವೈರಲ್ ಆಯ್ತು ಮದುವೆ ಆಮಂತ್ರಣ ಪತ್ರಿಕೆ


Wednesday, May 22nd, 2019 6:08 pm


ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಆಹ್ವಾನ ಪತ್ರಿಕೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಂಡ್ಯ ಸಂಸದರಾಗಿದ್ದಾರೆ.

ಹೌದು, ಮಂಡ್ಯದ ಅಭಿಮಾನಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಸಂಸದರು ಎಂದು ಹಾಕಿಸಿದ್ದು ತಮ್ಮ ಅಭಿಮಾನವನ್ನು ಮೆರೆದಿದ್ದಾರೆ. ಜೂ.9 ರಂದು ಶ್ರೀರಂಗಪಟ್ಟಣದಲ್ಲಿ ಮದುವೆ ನಡೆಯಲಿದ್ದು, ಈ ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನು ಇದೇ ವೇಳೆ ಇತ್ತ ಇಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ನಿಖಿಲ್ ಅವರು, ಒಂದೊಂದು ಸರ್ವೆಗಳಲ್ಲಿ ಒಂದೊಂದು ರೀತಿ ಫಲಿತಾಂಶ ಬಂದಿದೆ. ನಾನು ಯಾವುದನ್ನು ಗಣನೆಗೆ ತೆಗೆದುಕೊಂಡಿಲ್ಲ, ಏನೇ ಇದ್ದರು ಅದು. ಶಾರದಾಂಬೆ ಹಾಗೂ ಜನರ ಆಶೀರ್ವಾದದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions