ಎಸ್ಸಿ/ಎಸ್ಟಿ ನೌಕರರಿಗೆ ಮುಂಬಡ್ತಿ ಸಿಹಿ ಸುದ್ದಿ ನೀಡಿದ ದೋಸ್ತಿ ಸರಕಾರ


Friday, October 12th, 2018 5:22 pm

ಬೆಂಗಳೂರು: ಎಸ್​ಸಿ/ಎಸ್​ಟಿ ಸರ್ಕಾರಿ ನೌಕರರ ಮುಂಬಡ್ತಿ ವಿಧೇಯಕ ಜಾರಿಗೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ಸುಪ್ರೀಂಕೋರ್ಟ್ ಮೌಖಿಕ ಅಭಿಪ್ರಾಯವನ್ನು ಸ್ವಾಗತಿಸುತ್ತೇವೆ ಎಂದು ಕಾನೂನು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಅವರು ಇಂದು ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಿ.ಕೆ. ಪವಿತ್ರ ಪ್ರಕರಣ ಬಗ್ಗೆ ಸುಪ್ರೀಂಕೋರ್ಟ್ ನಿಂದ ರಾಜ್ಯ ಸರ್ಕಾರದ ಪರ ತೀರ್ಪು ಬಂದಿದೆ. ಆದರೆ, ಅಧಿಕೃತ ತೀರ್ಪಿನ ಬಳಿಕ ಸಚಿವ ಸಂಪುಟದ ಮುಂದಿಟ್ಟು ಕಾಯ್ದೆ ಜಾರಿಗೆ ತರುತ್ತೇವೆ. ಈ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಿದ್ದೇವೆ ಅಂತ ತಿಳಿಸಿದರು.

ಇದೇ ವೇಳೆ ವಿಧಾನಸೌಧದಲ್ಲಿ ಮಾಧ್ಯಮಗಳ ನಿರ್ಬಂಧಕ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಎಂ ಜೊತೆಗೆ ಮಾತನಾಡಿ ಗೊಂದಲ ಬಗೆಹರಿಸುತ್ತೇವೆ. ಯಾರ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅಧಿಕಾರ ಇಲ್ಲ. ಸರ್ಕಾರ ಮತ್ತು ಮಾಧ್ಯಮಗಳು ಜೊತೆ ಜೊತೆಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions