ಬಿಗ್ ನ್ಯೂಸ್ : ಮಾಜಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ, ಸ್ವಪಕ್ಷೀಯ ನಾಯಕನಿಂದ ಆರೋಪ


Tuesday, March 19th, 2019 3:44 pm


ಬೆಳಗಾವಿ: ಡಿನೋಟಿಫಿಕೇಷನ್​ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಅಪರಾಧಿಯಾಗಿದ್ದು, ಅವರು ಕೂಡಾ ಜೈಲಿಗೆ ಹೋಗುತ್ತಾರೆ ಅಂತ ಜಿಲ್ಲಾ ಕಾಂಗ್ರೆಸ್ ಮುಖಂಡ ಶಂಕರ್ ಮನವಳ್ಳಿ ಆರೋಪಿಸಿದ್ದಾರೆ.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ಅವಧಿಯಲ್ಲಿ ಅನೇಕ ಡಿನೋಟಿಫಿಕೇಷನ್ ನಡೆದಿದ್ದು, ಅವರು ಅಪರಾಧಿ ಸ್ಥಾನದಲ್ಲಿದ್ದಾರೆ. ಅವರನ್ನು ಜೈಲಿಗೆ ಹಾಕಬೇಕು ಅಂತ ಹೇಳಿದರು.

ಇನ್ನು ನಮ್ಮಂತಹ ನಿಷ್ಠಾವಂತ ಕಾರ್ಯಕರ್ತರು ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಚುನಾವಣೆ ಮಾಡುತ್ತೇವೆ. ಬೆಳಗಾವಿಯಲ್ಲಿ ಸರ್ವಾಧಿಕಾರಿ ವ್ಯವಸ್ಥೆ ನಡೆಯುತ್ತಿದ್ದು, ಇದರಿಂದ ನಿಷ್ಠಾವಂತ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ ಅಂತ ಬೇಸರ ವ್ಯಕ್ತಪಡಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions