ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೆಕನೂರ್ ಹತ್ಯೆ ಪ್ರಕರಣ : ಚುರುಕುಗೊಂಡ ಪೊಲೀಸ್ ತನಿಖೆ


Saturday, May 18th, 2019 11:17 am


ವಿಜಯಪುರ : ಕಳೆದ ನಿನ್ನೆ ಹತ್ಯೆಯಾದ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೆಕನೂರು ಹತ್ಯೆ ಪ್ರಕರಣದ ಕುರಿತು ಪೊಲೀಸರ ತನಿಖೆ ತೀವ್ರಗೊಂಡಿದೆ.

ಕಳೆದ ನಿನ್ನೆ ಅನುಮಾನಾಸ್ಪದವಾಗಿ ಹತ್ಯೆಯಾಗಿದ್ದ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೆಕನೂರು ಹತ್ಯೆ ತನಿಖೆಗೆ ಬಸವನ ಬಾಗೇವಾಡಿ ಡಿಎಸ್ಪಿ ಮಹೇಶ್ವರಗೌಡ ಹಾಗೂ ವಿಜಯಪುರ ಡಿಎಸ್ಪಿ ಅಶೋಕ್, ಓರ್ವ ಡಿವೈಎಸ್ಪಿ, ಓರ್ವ ಸಿಪಿಐ ಹಾಗೂ ಇಬ್ಬರು ಪೇದಗಳ ತನಿಖಾ ತಂಡ ರಚಿಸಲಾಗಿದೆ.

ಈ ಸಂಬಂಧ ವಿಜಯಪುರ ಎಸ್ಪಿ ಬಿ ಎಸ್ ನೇಮಗೌಡ ಮಾಹಿತಿ ನೀಡಿದ್ದು, ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೆಕನೂರ್ ಹತ್ಯೆ ಬಗ್ಗೆ ಸಮಗ್ರ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆ ಹಚ್ಚಲು ತನಿಖಾ ತಂಡ ರಚಿಸಲಾಗಿದೆ. ಈ ತನಿಖಾ ತಂಡದ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಸದ್ಯದಲ್ಲಿಯೇ ಹತ್ಯೆಯ ಹಿಂದಿನ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions