-->

ಪ್ರಭಾಸ್ ಅಭಿಮಾನಿಗಳಿಗೆ ಕಹಿಸುದ್ದಿ : ‘ಸಾಹೋ’ ಚಿತ್ರ ಬಿಡುಗಡೆ ಸದ್ಯಕ್ಕಿಲ್ಲ


Wednesday, July 17th, 2019 7:09 pm

ಸಿನಿಮಾಡೆಸ್ಕ್ : ಬಾಹುಬಲಿ-2 ಚಿತ್ರದ ನಂತರ ಪ್ರಭಾಸ್ ನಟಿಸುತ್ತಿರುವ ಬಹುನಿರೀಕ್ಷಿತ `ಸಾಹೋ’ ಚಿತ್ರದ ಎರಡನೇ ಟೀಸರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದ್ದು, ಸಿನಿಮಾದ ಬಗ್ಗೆ ಸಖತ್ ಹೈಪ್ ಕ್ರಿಯೇಟ್ ಮಾಡಿದೆ.

. ಬಾಲಿವುಡ್ ನಟಿ ಶ್ರದ್ಧ ಕಪೂರ್ ಹಾಗೂ ಪ್ರಭಾಸ್ ಕಾಂಬಿನೇಷನ್ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಸಖತ್ ಕುತೂಹಲ ಕೆರಳಿಸಿದೆ. ಸುಜೀತ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, 150 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸಲಾಗಿದೆ. ತೆಲುಗು, ತಮಿಳು, ಹಿಂದಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ ಬರಲಿದೆ ಎನ್ನಲಾಗಿತ್ತು. ಆದರೆ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ.

ಈಗಿನ ಮಾಹಿತಿ ಪ್ರಕಾರ ಚಿತ್ರವನ್ನು ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ. ಸದ್ಯದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದೆ.

ಕಳೆದ ಎರಡು ದಶಕಗಳಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಮಂದಿರ ಬೇಡಿ, ಪ್ರಭಾಸ್ ಅಭಿನಯಿಸುತ್ತಿರುವ ‘ಸಾಹೋ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಸಾಹೋ’ ಚಿತ್ರದಲ್ಲಿ ಮಂದಿರ ಬೇಡಿ ನೆಗೆಟೀವ್ ರೋಲ್ ನಲ್ಲಿ ಮಿಂಚಲಿದ್ದಾರೆಚಿತ್ರದ ಟೀಸರ್ ನಲ್ಲಿ ಅದ್ಭುತ ಆ್ಯಕ್ಷನ್ ದೃಶ್ಯಗಳು, ಉತ್ತಮ ಛಾಯಾಗ್ರಹಣ, ಹಿನ್ನಲೆ ಸಂಗೀತ ಅಧ್ಭುತವಾಗಿದ್ದು, ಪ್ರಭಾಸ್-ಶ್ರದ್ಧಾ ಕಪೂರ್ ಜೋಡಿ ಮೋಡಿ ಮಾಡಿದೆ.  ಸಾಹೋ ಚಿತ್ರ ಹೈ ಬಜೆಟ್ ನಲ್ಲಿ ಸಿದ್ದವಾಗಿರುವ ಸಿನಿಮಾವಾಗಿದ್ದು, ಸಾಹಸ ದೃಶ್ಯಗಳಿಗೇ 90 ಕೋಟಿ ರೂ. ಖರ್ಚು ಮಾಡಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions