ಬಹು ನಿರೀಕ್ಷಿತ ‘ಸಾಹೋ’ ಚಿತ್ರ ಆಗಸ್ಟ್ 15 ರಂದು ತೆರೆಗೆ


Tuesday, April 16th, 2019 8:12 pm

ಸಿನಿಮಾ ಡೆಸ್ಕ್ : ಬಾಹುಬಲಿ’ ಚಿತ್ರದ ನಂತರ ಪ್ರಭಾಸ್ ಅಭಿನಯಿಸುತ್ತಿರುವ ‘ಸಾಹೋ’ ಚಿತ್ರ ದಕ್ಷಿಣ ಭಾರತದ ದೊಡ್ಡ ಚಿತ್ರ. ಪ್ರಭಾಸ್ ನಾಯಕನಾಗಿರುವ ಚಿತ್ರಕ್ಕೆ ಬಾಲಿವುಡ್ ನಟಿ ಶ್ರದ್ಧ ಕಪೂರ್ ನಾಯಕಿ ಆಗಿ ನಟಿಸುತ್ತಿದ್ದು, ಚಿತ್ರದ ಬಗ್ಗೆ ಕ್ಯುರಿಯಾಸಿಟಿ ಸಹಜವಾಗಿದೆ.

ಇಬ್ಬರ ಕಾಂಬಿನೇಷನ್ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಸಖತ್ ಕುತೂಹಲ ಕೆರಳಿಸಿದ್ದು, ಚಿತ್ರದ ಕೆಲವು ರೊಮ್ಯಾಂಟಿಕ್ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈಗಾಗಲೇ ಸಾಹೋ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಕಳೆದ ಎರಡು ದಶಕಗಳಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಮಂದಿರ ಬೇಡಿ, ಪ್ರಭಾಸ್ ಅಭಿನಯಿಸುತ್ತಿರುವ ‘ಸಾಹೋ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಸಾಹೋ’ ಚಿತ್ರದಲ್ಲಿ ಮಂದಿರ ಬೇಡಿ ನೆಗೆಟೀವ್ ರೋಲ್ ನಲ್ಲಿ ಮಿಂಚಲಿದ್ದಾರೆ.

ಸುಜೀತ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, 150 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸಲಾಗಿದೆ. ತೆಲುಗು, ತಮಿಳು, ಹಿಂದಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ ಬರಲಿದೆ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions