‘ನಿಮ್ಮ ಕ್ಷೇತ್ರದಲ್ಲಿ ನಿಂತು ಗೆಲ್ಲುವ ವಿಶ್ವಾಸ ನಿಮಗೆ ಇಲ್ಲವೇ’ : ಮೋದಿ, ರಾಹುಲ್ ಗೆ ಪ್ರಕಾಶ್ ರೈ ಟಾಂಗ್


Sunday, March 17th, 2019 6:58 pm

ಬೆಂಗಳೂರು : ಎರಡು ಕ್ಷೇತ್ರದಿಂದ ಸ್ಪರ್ಧೆ ಯಾಕೆ.. ? ನಿಮ್ಮ ಕ್ಷೇತ್ರದಲ್ಲಿ ನಿಂತು ಗೆಲ್ಲುವ ವಿಶ್ವಾಸ ನಿಮಗೆ ಇಲ್ಲವೇ ಎಂದು ಬಹುಭಾಷಾ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾರಾದ್ರೂ ಸರೀನೇ ಯಾಕೆ ಎರಡು ಕ್ಷೇತ್ರದಿಂದ ಸ್ಪರ್ಧಿಸಬೇಕು, ಹೀಗೆ ಮಾಡುವುದರಿಂದ ಜನರು ಪಾವತಿಸಿದ ತೆರಿಗೆ ಹಣ ವ್ಯರ್ಥವಾಗುತ್ತದೆ, ಹಣ ಯಾರಪನ್ನದ್ದು ಎಂದು ಪ್ರಕಾಶ್ ರೈ ಕಿಡಿಕಾರಿದ್ದಾರೆ.

ಇನ್ನೂ, ಬೆಂಗಳೂರು ಕೇಂದ್ರದಿಂದ ರಾಹುಲ್ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು ‘ ರಾಹುಲ್ ಗಾಂಧಿ ಏನು ಇಲ್ಲಿಯವರಾ..? ಈ ಕ್ಷೇತ್ರ, ಇಲ್ಲಿನ ಜನರ ಬಗ್ಗೆ ರಾಹುಲ್ ಗಾಂಧಿ ಅವರಿಗೇನು ಗೊತ್ತಿದೆ ಎಂದು ಪ್ರಶ್ನಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions