ಸುಭಾಷಿತ :

Saturday, October 19 , 2019 4:35 PM

ಬೆಡಗಿ ರಶ್ಮಿಕಾರ ‘ಕೊಡಗು ಆಸ್ಪತ್ರೆ ಅಭಿಯಾನ’ದ ಟ್ವೀಟ್ : ಪ್ರತಾಪ್ ಸಿಂಹ ಹೇಳಿದ್ದೇನು..?


Sunday, June 16th, 2019 4:27 pm

ಬೆಂಗಳೂರು : ಸೋಷಿಯಲ್ ಮೀಡಿಯಾದಲ್ಲಿ #WeNeedEmergencyHospitalInKodagu ಟ್ವಿಟರ್ ಅಭಿಯಾನ ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಕೊಡಗು ಜಿಲ್ಲೆಯಲ್ಲಿ ಹೈಟೆಕ್ ಆಸ್ಪತ್ರೆಗಾಗಿ ನಟ ಶಿವರಾಜ್ ಕುಮಾರ್ ಧ್ವನಿಗೂಡಿಸಿದ ನಂತರ ನಟಿ ರಶ್ಮಿಕಾ ಮಂದಣ್ಣ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ನಟಿ ರಶ್ಮಿಕಾ ಮಂದಣ್ಣ, ತುಂಬಾ ಮುಖ್ಯವಾಗಿ ಬೇಕಾಗಿರುವುದು ಅಂದರೆ ಅದು ಆಸ್ಪತ್ರೆ ಹಾಗೂ ನಮ್ಮ ಕೂರ್ಗ್ ನಲ್ಲಿ ಆಸ್ಪತ್ರೆಯಿಲ್ಲ. ಒಳ್ಳೆಯ ಆಸ್ಪತ್ರೆಗಾಗಿ ನಾವು ದೂರ ಪ್ರಯಾಣಿಸಬೇಕು. ಅದರ ಬದಲು ಕೊಡಗಿನಲ್ಲಿ ಆಸ್ಪತ್ರೆ ಇದ್ದರೆ ಜನರಿಗೆ ತುಂಬಾನೇ ಸಹಾಯವಾಗುತ್ತದೆ. ದಯವಿಟ್ಟು ಸ್ಪಂದಿಸಿ ಎಂದು ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಅಲ್ಲದೇ, ರಶ್ಮಿಕಾರ ಹುಟ್ಟೂರಿನ ಬಗೆಗಿನ ಕಾಳಜಿ ಪೋಸ್ಟ್ ಗೆ ಆ ಕ್ಷೇತ್ರದ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಪ್ರತಿಕ್ರಿಯೆ ನೀಡಿದ್ದಾರೆ,  ನಾನು ಈಗಾಗಲೇ ಈ ಬಗ್ಗೆ ಕರ್ನಾಟಕದ ಸಿಎಂ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದು, ಸದ್ಯವೇ ಭೇಟಿಯಾಗಿ ಮಾತುಕತೆ ನಡೆಸಲು ಅಪಾಯಿಟ್ ಮೆಂಟ್ ತೆಗೆದುಕೊಂಡಿದ್ದೇನೆ, ಜೊತೆಗೆ ಕೇಂದ್ರದಲ್ಲಿರುವ ಮೋದಿಜೀ ಸರ್ಕಾರ ಕೂಡ ಈ ಬಗ್ಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ನಟಿ ರಶ್ಮಿಕಾ ಮಂದಣ್ಣ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions