ಸುಭಾಷಿತ :

Saturday, October 19 , 2019 4:34 PM

ನೆರೆ ಸಂತ್ರಸ್ತರ ಪರಿಹಾರ ಕಾರ್ಯದಲ್ಲಿ ಅಕ್ರಮ ಎಸಗಿದರೆ ಕಠಿಣ ಕ್ರಮ : ಅಧಿಕಾರಿಗಳಿಗೆ ಆರ್.ಅಶೋಕ್ ಖಡಕ್ ಎಚ್ಚರಿಕೆ


Sunday, October 13th, 2019 9:19 am

ಬೆಂಗಳೂರು : ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ಅಧಿಕಾರಿ ಅಕ್ರಮ ಎಸಗಿದರೆ ಅಂತಹವರನ್ನು ಸರ್ಕಾರಿ ಕೆಲಸದಿಂದ ವಜಾ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಪರಿಷತ್ ನಲ್ಲಿ ನಡೆದ ಪ್ರವಾಹ ಚರ್ಚೆಯಲ್ಲಿ ಮಾತನಾಡಿದ ಅಶೋಕ್, ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಯಾವುದೇ ಅಕ್ರಮವಾಗಬಾರದೆಂದು ಆರ್ ಟಿಜಿಎಸ್ ಮೂಲಕ ಹಣ ವರ್ಗಾಯಿಸಲಾಗುತ್ತಿದೆ. ಅದರಲ್ಲೂ ಅಕ್ರಮ ನಡೆದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ರಾಜ್ಯದ 103 ತಾಲೂಕುಗಳಲ್ಲಿ ಪ್ರವಾಹ ಉಂಟಾಗಿದ್ದರೆ, 49 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಆ ಕುರಿತು ಕಂದಾಯ ಇಲಾಖೆ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿದೆ. 2-3 ದಿನಗಳಲ್ಲಿ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗುವುದು ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions