ಬ್ರೇಕಿಂಗ್ : ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ರಾಧಿಕಾ ಕುಮಾರಸ್ವಾಮಿ ತಂದೆ ಇನ್ನಿಲ್ಲ


Sunday, May 19th, 2019 11:59 am

ಬೆಂಗಳೂರು : ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ಅನಾರೋಗ್ಯದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ರಾಧಿಕಾ ಕುಮಾರಸ್ವಾಮಿ ಅವರ ತಂದೆ ದೇವರಾಜ್ ಅವರು ಕೆಲ ದಿನಗಳಿಂದ ಅನಾರೋಗ್ಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ,ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಮಂಗಳೂರಿನ ಸೋಲೆತ್ತೂರು ಗ್ರಾಮದಲ್ಲಿ ಕೋಲ ಸಂಭ್ರಮದಲ್ಲಿ ರಾಧಿಕಾ ಅವರ ಕುಟುಂಬ ಭಾಗಿಯಾಗಿತ್ತು. ಸಂಭ್ರಮದ ಬಳಿಕ ದೇವರಾಜ್ ಅವರಿಗೆ ಕಫ ಹೆಚ್ಚಾಗಿದ್ದರಿಂದ ಇಂದು ಕೊನೆಯುಸಿರೆಳೆದಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions