ಸುಭಾಷಿತ :

Sunday, January 26 , 2020 6:42 PM

ಕಣಿವೆ ರಾಜ್ಯಕ್ಕೆ ಭೇಟಿ ನೀಡದಂತೆ `ರಾಹುಲ್ ಗಾಂಧಿ’ಗೆ ಮನವಿ


Saturday, August 24th, 2019 9:25 am

ಶ್ರೀನಗರ : ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ ಅವರು ಕಣಿವೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಈಗ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುವುದು ಸೂಕ್ತವಲ್ಲ ಎಂದು ಅಲ್ಲಿನ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಾಯಕರು ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜಮ್ಮು ಕಾಶ್ಮೀರ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರಾಜಕಾರಣಿಗಳು ಕಾಶ್ಮೀರಕ್ಕೆ ಭೇಟಿ ಕೊಡುವುದರಿಂದ ಜನ ಸಾಮಾನ್ಯರ ಜೀವನಕ್ಕೆ ತೊಂದರೆ ಕೊಟ್ಟಂತಾಗುತ್ತದೆ. ಇಲ್ಲಿನ ಮುಗ್ದ ಜನರನ್ನು ಅನಾನುಕೂಲ ಸ್ಥಿತಿಗೆ ತಳ್ಳುವುದು ಬೇಡ. ಭಯೋತ್ಪಾದನೆ, ಉಗ್ರರ ಮತ್ತು ಪ್ರತ್ಯೇಕ ಹೋರಾಟಗಾರರಿಂದ ಇವರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರ ವಹಿಸಿಕೊಂಡಿದೆ. ಹೀಗಾಗಿ ನೀವು ಕಾಶ್ಮೀರದ ಪ್ರಯಾಣ ರದ್ದು ಮಾಡಿ ಎಂದು ಮನವಿ ಮಾಡಿದೆ.

370  ಆರ್ಟಿಕಲ್ ರದ್ದುಗೊಂಡ ನಂತರ ಕಣಿವೆ ರಾಜ್ಯದಲ್ಲಿ ಪ್ರಕ್ಷುಬ್ದ ನಿರ್ಮಾಣವಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ಇದಕ್ಕೆ ಉತ್ತರಿಸಿದ್ದ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಕಾಶ್ಮೀರದ ಪರಿಸ್ಥಿತಿಯನ್ನು ಅವಲೋಕಿಸಲು ರಾಹುಲ್ ಗಾಂಧಿಯನ್ನು ಕಣಿವೆ ರಾಜ್ಯಕ್ಕೆ ಆಹ್ವಾನಿಸಿದ್ದರು.  ಸತ್ಯಪಾಲ್ ಮಲಿಕ್ ಅವರ ಆಹ್ವಾನವನ್ನು  ರಾಹುಲ್ ಗಾಂಧಿ ಸ್ವೀಕರಿಸಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions