ರಾಜ್ಯದೆಲ್ಲೆಡೆ ಮುಂದಿನ ಎರಡು ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ


Wednesday, October 17th, 2018 9:38 pm

ಬೆಂಗಳೂರು: ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ‌ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು. ಚಂಡಮಾರುತದ ಪರಿಚಲನೆಯಿಂದಾಗಿ ಉತ್ತರ, ದಕ್ಷಿಣ ಒಳನಾಡಿನ ಹಲವಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ, ಭೀಕರ ಮಳೆಯಿಂದ ಬೆಂಗಳೂರಿನ ಪ್ಯಾಲೇಸ್ ಗುಟ್ಟಹಳ್ಳಿ ಬಳಿ ಮರ ಧರೆಗುರುಳಿದ್ದು, ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions