ಈ ಕಾರಣಕ್ಕೆ ರಾಘವೇಂದ್ರ ರಾಜ್‌ಕುಮಾರ್‌ ಮಂತ್ರಾಲಯಕ್ಕೆ ಭೇಟಿ ನೀಡಿದ್ದು!


Thursday, June 14th, 2018 6:03 pm


ರಾಯಚೂರು: ತಂದೆಯವರ ಮಾರ್ಗದರ್ಶನದಲ್ಲಿ ನಾವು ಮಠಕ್ಕೆ ಪ್ರತಿ ವರ್ಷ ಬರುತ್ತೇವೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ನಾವು ಬೇಡಿಕೊಂಡಿದ್ದೇವೆ. ಹೊಸ ಕಾರ್ಯ ಆರಂಭಿಸುವಾಗ ಮಠಕ್ಕೆ ನಾವು ಬರುತ್ತೇವೆ ಎಂದು ನಟ ರಾಘವೇಂದ್ರ ರಾಜ್‌ಕುಮಾರ್‌ ಅವರು ಹೇಳಿದರು.

ಅವರು ಬುಧವಾರ ರಾಯಚೂರಿನ ಮಂತ್ರಾಲಯದ ರಾಘವೇಂದ್ರ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಉರುಳು ಸೇವೆ ಮಾಡಿ ರಾಯರ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದರು ಇದೇ ವೇಳೆ ಅವರು ಮಾತನಾಡಿ ರಾಘವೇಂದ್ರ ಸ್ವಾಮಿ ದರ್ಶನದಿಂದ ನನ್ನ ಆರೋಗ್ಯ ಸುಧಾರಿಸಿದೆ. ರಾಯರ ಆಶೀರ್ವಾದದಿಂದಲೇ ನಮ್ಮ ಕುಟುಂಬ ಬೆಳೆದಿದೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಪುತ್ರ ಮತ್ತು ನಟ ವಿನಯ್‌ ರಾಜ್‌ಕುಮಾರ್‌ ಮಾತನಾಡಿ, ನೂತನ ಸಿನಿಮಾ ಸ್ಕ್ರಿಪ್ಟ್ ಪೂಜೆಗಾಗಿ ಮಂತ್ರಾಲಯಕ್ಕೆ ಬಂದಿದ್ದೇವೆ. ಪುನೀತ್ ಜತೆ ನಟಿಸುವ ಆಸೆಯಿದೆ. ನೂತನ ಸಿನಿಮಾ ಗ್ರಾಮಾಯಣ ಆಗಸ್ಟ್‌ನಲ್ಲಿ ಸೆಟ್ಟೇರಲಿದೆ ಅಂತ ಹೇಳಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions