ಶರತ್ ಹತ್ಯೆ ಪ್ರಕರಣ : ದೇವರ ಮೊರೆ ಹೋದ ಮಾಜಿ ಸಚಿವ ರಮಾನಾಥ ರೈ


Sunday, June 10th, 2018 11:30 am

ಮಂಗಳೂರು:  ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಗಳಲ್ಲಿ ಬಿ. ರಮಾನಾಥ ರೈ ಮೇಲೆ ಯೂ ಆರೋಪ ಕೇಳಿಬಂದಿತ್ತು. ಈ ನಡುವೆ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಪರೋಕ್ಷವಾಗಿ ಶರತ್ ಹತ್ಯೆಗೆ ಸಂಬಂಧಪಟ್ಟಂತೆ ಎದಿದ್ದ ವಿವಾದಗಳು ಕೂಡ ಅಂತ ರಮಾನಾಥ್ ರೈ ಮನಗಂಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಮಾಜಿ ಸಚಿವ ರಮಾನಾಥ ರೈ ಅವರು ಕೇರಳದ ಕಾಸರಗೋಡು ಜಿಲ್ಲೆಯಲ್ಲಿರೋ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾನತ್ತೂರು ಶ್ರೀ ನಾಲ್ವರ್ ದೇವಸ್ಥಾನದ ಮೊರೆ ಹೋಗಿದ್ದಾರೆ.

ಶರತ್ ಹತ್ಯೆ ಪ್ರಕರಣದಲ್ಲಿ ನನ್ನ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ನನಗೆ ಮಾನಸಿಕವಾಗಿ ತೀವ್ರ ನೋವುಂಟಾಗಿದೆ. ನಾನು ತಪ್ಪು ಮಾಡಿದ್ದರೆ ನನಗೆ ಶಿಕ್ಷೆಯಾಗಲಿ. ಸುಮ್ಮನೇ ನನ್ನ ಮೇಲೆ ಆರೋಪ ಮಾಡಿದವರನ್ನು ಕರೆದು ವಿಚಾರಣೆ ನಡೆಸಿ ಎಂದು ದೈವಸ್ಥಾನದ ಸನ್ನಿಧಿಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions