ಶಾಕಿಂಗ್ : ಮೆಜೆಸ್ಟಿಕ್ ನಲ್ಲಿ ಯುವತಿಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರಕ್ಕೆ ಯತ್ನ


Thursday, July 12th, 2018 7:29 pm

ಬೆಂಗಳೂರು : ಮೆಜೆಸ್ಟಿಕ್  ಬಸ್ ನಿಲ್ದಾಣದಲ್ಲಿ ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರು ಮೂಲದ ಯುವತಿ ಕಳೆದ ಜು.9 ರಂದು ಮಂಗಳೂರಿನಿಂದ ಬಸ್ ಮೂಲಕ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಕಾಮುಕರು ಯುವತಿಯನ್ನ ಕಿಡ್ನಾಪ್ ಮಾಡಿದ್ದಾರೆ, ಗುಂಪಿನಲ್ಲಿ ಬಂದ ಕಾಮುಕರು ಹಣ ಕೊಡುತ್ತೇನೆ ತನ್ನ ಜೊತೆ ಬರ್ತೀಯಾ ಎಂದು ಕೇಳಿದ್ದಾರೆ, ಇದಕ್ಕೆ ಯುವತಿ ನಿರಾಕರಿಸಿದ್ದು, ಕಿರಾತಕರಿಂದ ತಪ್ಪಿಸಿಕೊಳ್ಳಲು ನಗರದ ರೈಲ್ವೆ ನಿಲ್ದಾಣದ ಕಡೆ ಯುವತಿ ಹೋಗುತ್ತಿದ್ದಾಗ ಮತ್ತೆ ಹಿಂಬಾಲಿಸಿದ ಕಾಮುಕರು ಆಕೆಯನ್ನು ಕಿಡ್ನಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ನಂತರ ಯುವತಿ ಕಿರುಚಿಕೊಂಡಾಗ ಹೆದರಿ ಯುವತಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಯುವತಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions