ಶಾಲೆಯಲ್ಲೇ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ : ಆರೋಪಿ ಅರೆಸ್ಟ್


Monday, January 14th, 2019 9:35 pm

ಭುವನೇಶ್ವರ್ : ಅತ್ಯಾಚಾರ ಸಂತ್ರಸ್ತೆ 8 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿದ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆ ಹಾಕಿ ಅತ್ಯಾಚಾರಿಯನ್ನು ಬಂಧಿಸಿದ್ದಾರೆ.

ಹಾಸ್ಟೆಲ್ ನಲ್ಲಿ ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ ಹುಟ್ಟೂರಿಗೆ ತೆರಳಿದ್ದಾಗ 23 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಆಕೆ ಮೇಲೆ ಅತ್ಯಾಚಾರ ನಡೆಸಿದ್ದನು ಎಂದು ಪೊಲೀಸರು ಹೇಳಿದ್ದಾರೆ.

ಬಾಲಕಿ ಎಂಟು ತಿಂಗಳ ಹಿಂದೆ ಶಾಲೆಯಿಂದ ಮನೆಗೆ ಹೋಗುವಾಗ ಅತ್ಯಾಚಾರಕ್ಕೆ ಒಳಗಾಗಿದ್ದಳು ಎನ್ನಲಾಗಿದ್ದು, ಈ ಅಪರಾಧಕ್ಕೆ ಕಾರಣವಾದವರನ್ನು ಕೂಡಲೇ ಬಂಧಿಸಬೇಕು ಎಂದು ಪೊಲೀಸರಿಗೆ ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ನೂ ಬಾಲಕಿ ಗರ್ಭಿಣಿಯಾಗಿದ್ದುಕೊಂಡು ಹಲವು ತಿಂಗಳುಗಳಿಂದ ಶಾಲೆಗೆ ಆಗಮಿಸುತ್ತಿದ್ದರೂ ಪೊಲೀಸರಿಗೆ ತಿಳಿಸದೆ ಇರುವ ಹಿನ್ನೆಲೆ 7 ಮಂದಿ ಶಾಲಾ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions