ಶಬರಿಮಲೆಯಲ್ಲಿ ಮಕರ ಜ್ಯೋತಿ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು


Monday, January 14th, 2019 8:25 pm

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯ ದರ್ಶನ ಪಡೆದರು.

ದೇವಾಲಯದಿಂದ 8 ಕಿಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಸಂಜೆ 6.38 ರ ಸುಮಾರಿಗೆ ಜ್ಯೋತಿ ಕಾಣಿಸಿಕೊಂಡಿತ್ತು. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಭಕ್ತರು ಮಕರ ಜ್ಯೋತಿ ದರ್ಶನವಾಗುತ್ತಿದ್ದಂತೆ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಜಯಘೋಷ ಮಾಡಿದರು.ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಜ್ಯೋತಿಯನ್ನು ಕಣ್ತುಂಬಿಕೊಂಡರು.

ಪ್ರತಿ ವರ್ಷ ಜನವರಿ 14 ರಂದು ಸಂಜೆ ಅಯ್ಯಪ್ಪ ಸ್ವಾಮಿಗೆ ಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಬರುವ ಭಕ್ತರು ಜ್ಯೋತಿ ದರ್ಶನ ಪಡೆಯಲು ಎರಡು ಮೂರು ದಿನಗಳ ಮುಂಚೆಯೇ ಆಗಮಿಸುತ್ತಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions