‘ಭಾನುವಾರ ಸಿಎಂ ಕುಮಾರಸ್ವಾಮಿ ಮನೆಗೆ ಮುತ್ತಿಗೆ ಹಾಕ್ತೀವಿ’ : ಶೋಭಾ ಕರಂದ್ಲಾಜೆ


Friday, June 14th, 2019 9:20 pm

ಬೆಂಗಳೂರು : ಜಿಂದಾಲ್ ಕಂಪನಿಗೆ ಭೂಮಿ ನೀಡುವ ಪ್ರಕರಣದಲ್ಲಿ ರಾಜ್ಯ ಸರ್ಕಾರ ಈ ವಿಚಾರವನ್ನು ಉಪಸಮಿತಿಗೆ ನೀಡಿರುವುದನ್ನು ಬಿಜೆಪಿ ಒಪ್ಪೋದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ, ಭಾನುವಾರ ಸಿಎಂ ಕುಮಾರಸ್ವಾಮಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ, ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುವುದನ್ನು ಮುಂದುವರೆಸಿದೆ ಎಂದು ಎಂದು ಆರೋಪಿಸಿದರು.

 

ಸಿಎಂ ಜಿಂದಾಲ್ ಬಗ್ಗೆ ಚರ್ಚೆ ನಡೆಸಲು ಸಭೆ ಕರೆದಿದ್ದಾರೆ., ಆದರೆ ಈ ಸಭೆಯಲ್ಲಿ ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರವನ್ನು ಜೀವಂತವಾಗಿಡುವ ಕೆಲಸ ನಡೆದಿದೆ. ಐಎಂಎ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಗೆ ನೀಡಿ ಮುಚ್ಚಿ ಹಾಕಲು ಮುಂದಾಗಿದೆ. ಈ ಪ್ರಕರಣವನ್ನು ಸಿಬಿಐ ಅಥವಾ ಸಿಐಡಿಗೆ ನೀಡಬೇಕು. ಜಮೀರ್ ಹಾಗೂ ರೋಷನ್ ಬೇಗ್ ಮಾತ್ರ ಈ ಪ್ರಕರಣದಲ್ಲಿ ಇಲ್ಲಾ..ಇನ್ನೂ ಅನೇಕ ನಾಯಕರಿದ್ದಾರೆ ಎಂದು ಆರೋಪಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions