ಸುಭಾಷಿತ :

Tuesday, September 17 , 2019 6:56 AM

-->

ಉಪಸಮರಕ್ಕೆ `ಕಾಂಗ್ರೆಸ್’ ಭರ್ಜರಿ ಸಿದ್ಧತೆ : ಸ್ಥಳೀಯ ಮುಖಂಡರೊಂದಿಗೆ ಇಂದು ಸಿದ್ದರಾಮಯ್ಯ ಸಭೆ


Saturday, September 14th, 2019 10:22 am

ಬೆಂಗಳೂರು : ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ಗೆಲ್ಲಲು ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಅನರ್ಹ ಶಾಸಕರ ಕ್ಷೇತ್ರಗಳ ಸ್ಥಳೀಯ ಮುಖಂಡರ ಸಭೆ ಕರೆದಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸೋಲಿಸುವ ಮೂಲಕ ಅನರ್ಹ ಶಾಸಕರ ಶಾಕ್ ನೀಡಲು ಮುಂದಾಗಿರುವ ಕಾಂಗ್ರೆಸ್ ಅನರ್ಹ ಕ್ಷೇತ್ರಗಳಲ್ಲಿ ಗೆಲ್ಲಲು ರಣತಂತ್ರ ರೂಪಿಸಿದೆ.

ಇಂದು ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಚಿಕ್ಕಬಳ್ಳಾಪುರ, ಹಿರೇಕೆರೂರು, ರಾಣೆಬೆನ್ನೂರು, ಹುಣಸೂರು, ಮಸ್ಕಿ ಹಾಗೂ ಕೆ.ಆರ್. ಪೇಟೆ ಕ್ಷೇತ್ರಗಳ ಜಿಲ್ಲಾಧ್ಯಕ್ಷರು, ಕ್ಷೇತ್ರಗಳ ಮುಖಂಡರು ಸೇರಿದಂತೆ ಹಲವರಿಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions