`ಎಸ್ಎಸ್ಎಲ್ ಸಿ ಮರುಮೌಲ್ಯಮಾಪನ’ ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ


Saturday, May 18th, 2019 10:19 am

ಬೆಂಗಳೂರು : 2019 ನೇ ಸಾಲಿನ ಎಸ್ ಎಸ್ಎಲ್ ಸಿ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನಕ್ಕಾಗಿ ಆನ್ ಲೈನ್ ನಲ್ಲಿ ನಿಗದಿತ  ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ. 20 ರ ವರೆಗೆ ವಿಸ್ತರಿಸಲಾಗಿದೆ.

ಮಾರ್ಚ್/ಏಪ್ರಿಲ್ ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ್ದ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಹಲವು ಶಾಲೆಗಳು ಹಾಗೂ ಪೋಷಕರು/ ಅಭ್ಯರ್ಥಿಗಳಿಂದ ಬಂದಿದ್ದ ಕೋರಿಕೆಗಳನ್ನು ಆಧರಿಸಿದ ಹಿನ್ನೆಲೆಯಲಲ್ಇ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸಲಾಗಿದೆ ಎಂದು ಎಸ್ಎಸ್ಎಲ್ ಸಿ ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions