ರಾಯಚೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಎಲೆಕ್ಟ್ರಿಕ್ ಬಸ್ ಗಳನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ರಾಯಚೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಶ್ರೀರಾಮುಲು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಎಲೆಕ್ಟ್ರಿಕ್ ಬಸ್ಗಳನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚಿಂತನೆ ನಡೆದಿದೆ, ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿದರು,
ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಅನುದಾನದಲ್ಲಿ 1,600 ಬಸ್ಗಳನ್ನು ಖರೀದಿ ಮಾಡಲಾಗುವುದು. ಬೆಂಗಳೂರು ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಎಲೆಕ್ಟ್ರಿಕ್ ಬಸ್ಗಳನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು. . 2030ರ ಒಳಗಾಗಿ 27,000 ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲಾಗುವುದು. ಈಗಾಗಲೇ ಈ ಬಗ್ಗೆ ನಮ್ಮ ಸರ್ಕಾರ ಕ್ರಿಯಾಯೋಜನೆ ರೂಪಿಸಿದೆ. ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್ಗಳು ಓಡಾಡುತ್ತಿದ್ದು, ಇನ್ಮುಂದೆ ರಾಜ್ಯಾದ್ಯಂತ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಾಗುತ್ತದೆ, ಕಲ್ಯಾಣ ಕರ್ನಾಟಕ ಭಾಗಕ್ಕೆ 1,600 ಬಸ್ಗಳನ್ನು ಖರೀದಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.
BREAKING NEWS: ಚಾಮರಾಜನಗರದಲ್ಲಿ ಮುರಿದು ಬಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ : ಪ್ರಾಣಪಾಯದಿಂದ ಭಕ್ತರು ಪಾರು
ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ : ಸಿದ್ದರಾಮಯ್ಯ