ತುಮಕೂರು : ನಾಳೆ ನಡೆಯಲಿರುವ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ


Friday, May 11th, 2018 3:02 pm

ತುಮಕೂರು: ನಾಳೆ ನಡೆಯಲಿರುವ ಚುನಾವಣಾಗೆ ತುಮಕೂರು ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಜಿಲ್ಲೆಯಾದ್ಯಂತ ಒಟ್ಟು 2074  ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

ಇವುಗಳಲ್ಲಿ 693 ಸೂಕ್ಷ್ಮ ಹಾಗೂ 512 ಅತಿಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಿ ನಿಗಾ ವಹಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 22,14,605  ಮತದಾರರಿದ್ದು ಅದರಲ್ಲಿ 1113878  ಪುರುಷ ಮತದಾರರು, 1100561 ಮಹಿಳಾ ಮತದಾರರು ಹಾಗೂ 166 ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ.

867 ಮತಗಟ್ಟೆಗಳಲ್ಲಿ ಅಂಗವಿಕಲ ಮತದಾರರಿದ್ದು ವೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಮಹಿಳಾ ಮತದಾರರು ಹೆಚ್ಚಿಗೆ ಇರುವ ಪ್ರದೇಶದಲ್ಲಿ ಒಟ್ಟು 25 ಪಿಂಕ್ ಬೂತ್ ಗಳನ್ನು ತೆರೆದು ಅನುಕೂಲ ಮಾಡಿಕೊಡಲಾಗಿದೆ.

ಚುನಾವಣಾ ಪ್ರಕ್ರಿಯೆಗಾಗಿ ಒಟ್ಟು 14 ಸಾವಿರ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಸೂಕ್ತ ಪೊಲೀಸ್ ಭದ್ರತೆಯನ್ನೂ ಒದಗಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions