2001ರಿಂದ ಇದುವರೆಗೆ 42.37 ಲಕ್ಷ ಮನೆ ನಿರ್ಮಾಣ : ಸಿಎಂ ಕುಮಾರಸ್ವಾಮಿ


Thursday, June 20th, 2019 10:06 pm

ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು ವಸತಿ ಇಲಾಖೆ ಯೋಜನೆಗಳ ಪರಿಶೀಲನಾ ಸಭೆ ನಡೆಯಿತು.

ಈ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆಯ ಲಾಭವನ್ನು ತಲುಪಿಸಿ. ಈ ಮೂಲರ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ವಸತಿ ನಿರ್ಮಿಸಿಕೊಟ್ಟು ಗುಡಿಸಲು ಮುಕ್ತ ರಾಜ್ಯ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ವಸತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಸಿಎಂ ಮಾತಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಬಡತನ ರೇಖೆಗಿಂತ ಕೆಳಗಿರುವವರಿಗಾಗಿ ರಾಜ್ಯದಲ್ಲಿ 2001 ರಿಂದ ಈವರೆಗೆ 42.37 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ.  ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ 7 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ವಸತಿ ಇಲಾಖೆ ಅಧಿಕಾರಿಗಳು ತಿಳಿಸಿದರು.

ಈ ಸಭೆಯಲ್ಲಿ  ವಸತಿ ಸಚಿವ ಎಂ.ಟಿ.ಬಿ.ನಾಗರಾಜ್, ಕರ್ನಾಟಕ ವಸತಿ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಅನ್ಬುಕುಮಾರ್, ವಸತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಉಪಸ್ಥಿತರಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions