ಬ್ರೇಕಿಂಗ್ : ಭಾರತಕ್ಕೆ ವಿಜಯ್ ಮಲ್ಯ ಗಡಿಪಾರು ಮಾಡಿ, ಲಂಡನ್ ಕೋರ್ಟ್ ಮಹತ್ವದ ತೀರ್ಪು


Monday, December 10th, 2018 5:50 pm


ಲಂಡನ್: ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿಸದೆ ವಿದೇಶದಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಗಡಿಪಾರು ಕುರಿತು ಲಂಡನ್ ಕೋರ್ಟ್ ಸೋಮವಾರ ತೀರ್ಪು ಪ್ರಕಟ ಮಾಡಿದೆ.

ವೆಸ್ಟ್ ಮಿನ್ ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಮಲ್ಯ ಪ್ರಕರಣದ ವಿಚಾರಣೆ ನಡೆಯುತ್ತಿತು. ಇಂದು ತೀರ್ಪು ಪ್ರಕಟ ಮಾಡಿದೆ.

ಮುಂದೇನು? ಮಲ್ಯ ಗಡಿಪಾರು ಮಾಡುವಂತೆ ಕೋರ್ಟ್ ತೀರ್ಪು ನೀಡಿರುವ ಹಿನ್ನಲೆಯಲ್ಲಿ, ಆದೇಶ ಬ್ರಿಟನ್ ಗೃಹ ಕಾರ್ಯದರ್ಶಿಗೆ ತಲುಪುತ್ತದೆ. ಸರ್ಕಾರದ ಪರವಾಗಿ ಕಾರ್ಯದರ್ಶಿ ಗಡಿಪಾರು ಆದೇಶ ಹೊರಡಿಸಿ ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡುತ್ತಾರೆ. ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಪರವಾಗಿ ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗದಿದ್ದರೆ ಮತ್ತು ಗೃಹ ಕಾರ್ಯದರ್ಶಿ ಕೂಡ ಗಡಿಪಾರು ಆದೇಶ ಹೊರಡಿಸಿದ 28 ದಿನಗಳ ಒಳಗೆ ಮಲ್ಯ ಬ್ರಿಟನ್ ತೊರೆಯಬೇಕಾಗಿದೆ.

ಸಾಲ ಮರುಪಾವತಿ ಮಾಡದೆ ಬ್ರಿಟನ್‌ನಲ್ಲಿ ಮಲ್ಯ ತಲೆಮರೆಸಿಕೊಂಡಿದ್ದರು. ಮಲ್ಯ ಅವರನ್ನು ಹಸ್ತಾಂತರಿಸುವಂತೆ ಭಾರತದ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಮನವಿ ಲಂಡನ್‌ನ ವೆಸ್ಟ್‌ ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಇನ್ನು ತೀರ್ಪು ಪ್ರಕಟವಾಗುತ್ತಿದ್ದ ಹಾಗೇ ಗಡಿಪಾರು ಪ್ರಶ್ನಿಸಿ ನ್ಯಾಯಾಲಯದ ತೀರ್ಪುನ್ನು ಪ್ರಶ್ನಿಸಿ ಲಂಡನ್ ಹೈ ಕೋರ್ಟ್ ಗೆ ಮೇಲ್ನನವಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions