ಸುಭಾಷಿತ :

Sunday, January 26 , 2020 4:16 AM

ಶಾಸಕ ಆನಂದ್ ಸಿಂಗ್ ಹುಡುಕಿ ಕೊಡಿ : ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ನಿಂದ ಹೊಸಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಗೆ ದೂರು


Wednesday, July 17th, 2019 7:40 pm


ಬಳ್ಳಾರಿ : ಬೆಂಗಳೂರು ನಗರ ಎಸ್ ಟಿ ಸೋಮಶೇಖರ್, ಭೈರತಿಬಸವರಾಜ್ ಹಾಗೂ ವಿ ಮುನಿರತ್ನ ಕಾಣೆಯಾಗಿದ್ದಾರೆ ಹುಡುಕಿ ಕೊಡಿ ಎಂದು ಕ್ಷೇತ್ರದ ಮತದಾರರು, ಕಾರ್ಯಕರ್ತರು ಸ್ಪೀಕರ್ ರಮೇಶ್ ಕುಮಾರ್ ಗೆ ದೂರು ನೀಡಿದ್ದರೇ, ಮತ್ತೊಂದೆಡೆ ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಕಾಣೆಯಾಗಿದ್ದಾರೆ. ಹುಡುಕಿಕೊಡುವಂತೆ ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ಪಿಗೆ ದೂರು ನೀಡಿದ್ದಾರೆ.

ತಮ್ಮ ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರು, ಮುಂಬೈನ ಹೋಟೆಲ್ ನಲ್ಲಿ ಹೋಟೆಲ್ ಪಾಲಿಟಿಕ್ಸ್ ನಲ್ಲಿ ನಿರತರಾಗಿದ್ದಾರೆ. ಈ ಮೂಲಕ ಕ್ಷೇತ್ರ ಮತದಾರರು, ಕಾರ್ಯಕರ್ತರು ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಶಾಸಕರು ಕಾಣೆಯಾಗಿದ್ದಾರೆ ಎನ್ನುವ ದೂರು ಸಲ್ಲಿಸುತ್ತಿರುವವರ ಸಂಖ್ಯೆ ಮುಂದುವರೆದಿದೆ.

ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ಬಳ್ಳಾರಿಯ ವಿಜಯನಗರ ಕ್ಷೇತ್ರ ಶಾಸಕರಾದ ಆನಂದ್ ಸಿಂಗ್ ಕಳೆದ 10 ದಿನಗಳಿಂದ ಕಾಣೆಯಾಗಿದ್ದಾರೆ. ನಾವು ಶಾಸಕ ಆನಂದ್ ಸಿಂಗ್ ಅವರನ್ನು ಸಂಪರ್ಕಿಸಲು ಸತತವಾಗಿ ಅನೇಕ ಬಾರಿ ಪ್ರಯತ್ನ ಪಟ್ಟರೂ ಫಲಕಾರಿಯಾಗಿಲ್ಲ. ಹೀಗಾಗಿ ತಾವುಗಳು ದಯಮಾಡಿ ಶಾಸಕರಾದ ಆನಂದ್ ಸಿಂಗ್ ಅವರನ್ನು ಹುಡುಕಿ ಕೊಡಬೇಕೆಂದು ಕೋರುತ್ತೇವೆ ಎಂದು ಹೊಸಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಅವರಿಗೆ ದೂರು ನೀಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions