ಕ್ರೀಡಾಂಗಣಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿ! ಮುಂದೇನಾಯ್ತು ಗೊತ್ತಾ?


Friday, October 12th, 2018 1:52 pm

ಹೈದರಾಬಾದ್ : ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಘಟನೆ ನಡೆದಿದೆ.

ಟೆಸ್ಟ್ ಪಂದ್ಯ ಆರಂಭವಾಗಿ ಒಂದು ಗಂಟೆ ಆಗಿತ್ತು. ಈ ವೇಳೆ ಅಭಿಮಾನಿಯೊಬ್ಬ ಬ್ಯಾರಿಕೇಡ್ ಹಾರಿಬಂದು ಕೊಹ್ಲಿ ಅವರನ್ನು ತಬ್ಬಿಕೊಂಡು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾನೆ. ಈ ವೇಳೆ ಅಭಿಮಾನಿಯನ್ನು ಕೊಹ್ಲಿ ತಪ್ಪಿಸಲು ಪ್ರಯತ್ನಿಸಿದ್ದಾರೆ. ಆದರೆ ಹಠ ಬಿಡದೇ ಕೊಹ್ಲಿ ಅವರನ್ನು ತಬ್ಬಿಕೊಂಡಿದ್ದಾನೆ.

ತಕ್ಷಣ ಸ್ಥಳಕ್ಕೆ ಬಂದ ರಕ್ಷಣಾ ಸಿಬ್ಬಂದಿ ಆ ಅಭಿಮಾನಿಯನ್ನು ಮೈದಾನದಿಂದ ಹೊರ ಹಾಕಿದ್ದಾರೆ. ಈ ಮೊದಲು ರಾಜ್ ಕೋಟ್ ಟೆಸ್ಟ್ ವೇಳೆಯೂ ಇಂತಹ ಘಟನೆ ನಡೆದಿತ್ತು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions