ಮಹಿಳಾ ದಸರಾಗೆ ಚಾಲನೆ: ಹೆಣ್ಣುಮಕ್ಕಳ ದುಡಿಮೆಗೆ ಪ್ರೋತ್ಸಾಹಿಸಿ ಅಂದ್ರು ಸಚಿವೆ ಜಯಮಾಲ


Friday, October 12th, 2018 4:20 pm


ಮೈಸೂರು: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಿರುವ ಮಹಿಳಾ ಮತ್ತು ಮಕ್ಕಳ‌ ದಸರಾಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲ ಚಾಲನೆ ನೀಡಿದರು.

ನಗರದ ಜೆ.ಕೆ. ಮೈದಾನದಲ್ಲಿ ಆಯೋಜಿಸಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಜಯಮಾಲ ಅವರು ದೀಪ ಹಚ್ಚುವ ಮೂಲಕ ಚಾಲನೆ ನೀಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಸಬಲೀಕರಣಕ್ಕಾಗಿ ನಮ್ಮ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಂತಹ ಕಾರ್ಯಕ್ರಮಗಳಲ್ಲಿ ಮಹಿಳಾ ದಸರಾ ಕೂಡ ಒಂದು ಎಂದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯದ ಮಹಿಳಾ ಕುಶಲಕರ್ಮಿಗಳು ಪಾಲ್ಗೊಂಡು ತಾವೇ ತಯಾರಿಸಿದ ಕರಕುಶಲ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕಿಟ್ಟಿದ್ದರು. ಆ ಮೂಲಕ ವಿಭಿನ್ನ ವಸ್ತುಗಳನ್ನು ಈ ಭಾಗದ ಜನರಿಗೆ ಪರಿಚಯಿಸುವ ಮತ್ತು ತರಬೇತಿ ನೀಡುವ ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಮಹಿಳಾ ಉದ್ಯಮಿಗಳು ತಾವು ತಯಾರಿಸಿದ್ದ ವಸ್ತುಗಳನ್ನು ಮಾರಾಟಕ್ಕಿಟ್ಟಿದ್ದರು.‌

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions