ಬಾಡಿಗೆ ಮನೆ ವಿವಾದ : ಯಶ್ ತಾಯಿ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸಿದ ಹೈಕೋರ್ಟ್


Wednesday, June 19th, 2019 7:54 am

ಬೆಂಗಳೂರು : ನಟ ರಾಕಿಂಗ್ ಸ್ಟಾರ್ ಯಶ್ ಬಾಡಿಗೆ ಮನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕರು ಯಶ್ ಮನೆ ಖಾಲಿ ಮಾಡುವಾಗ ಕೆಲವು ಬೆಲೆ ಬಾಳುವ ವಸ್ತುಗಳನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿ ಯಶ್ ತಾಯಿ ಪುಷ್ಪಾ ವಿರುದ್ಧ ಗಿರಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರನ್ನು ಪ್ರಶ್ನಿಸಿ ಯಶ್ ತಾಯಿ ಪುಷ್ಪಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಾವು ಹೈಕೋರ್ಟ್ ಹೇಳಿದಂತೆ ಬಾಡಿಗೆ ಮನೆ ಖಾಲಿ ಮಾಡಿದ್ದೇವೆ. ಕೋರ್ಟ್ ಹೇಳಿದಷ್ಟು ಹಣವನ್ನೂ ಪಾವತಿಸಿದ್ದೇವೆ. ಮನೆಗಾಗಿ ನಾವು ಹಾಕಿದ ವಸ್ತುಗಳನ್ನು ಕೊಂಡೊಯ್ದಿದ್ದೇವೆ. ಅವುಗಳನ್ನು ತೆಗೆಯುವಾಗ ಸ್ವಲ್ಪ ಡ್ಯಾಮೇಜ್ ಆಗಿದೆ. ಅದಕ್ಕಾಗಿ ಎಫ್ ಐಆರ್ ದಾಖಲಿಸಿದ್ದು, ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಸದ್ಯ ಅರ್ಜಿವಿಚಾರಣೆ ನಡೆಸಿದ ನ್ಯಾಯಾಲಯ, ಮಾಲೀಕರು ಪುಷ್ಪಾರ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಿದೆ. ಇದರಿಂದ ಯಶ್ ಕುಟುಂಬಕ್ಕೆ ಕೊಂಚ ರಿಲೀಫ್ ಸಿಕ್ಕಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions