ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಲೆಗೈದು ಪ್ರಿಯಕರ ಆತ್ಮಹತ್ಯೆ


Friday, September 28th, 2018 3:58 pm

ಮಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಲೆಗೈದು ಪ್ರಿಯಕರ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಪ್ರಾಂತ್ಯ ಗ್ರಾಮದಲ್ಲಿ ನಡೆದಿದೆ.22 ವರ್ಷದ ಚರಿಷ್ಮಾಳ ಕೊಲೆಯಾದ ಯುವತಿಯಾಗಿದ್ದು, 26 ವರ್ಷದ ಲೋಹಿತ್ ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನಾಗಿದ್ದಾನೆ.

ಮೃತ ರೋಹಿತ್ ಮಂಗಳೂರು ನಗರದ ಬಜಾಲ್ ನಿವಾಸಿಯಾಗಿದ್ದು, ಚರಿಷ್ಮಾ ಅವರು ಪ್ರಾಂತ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಅಂತ ತಿಳಿದು ಬಂದಿದೆ. ಇನ್ನು ಲೋಹಿತ್, ಚರಿಷ್ಮಾ ಅವರ ಸಂಬಂಧಿಕನಾಗಿದ್ದು, ಮನೆಗೆ ಆಗಾಗ ಬರುತ್ತಿದ್ದನು ಎನ್ನಲಾಗಿದೆ. ಯುವತಿ ಮನೆಯಲ್ಲಿ ಒಬ್ಬಳೇ ಇದ್ದಾಗ ಲೋಹಿತ್ ಆಕೆಯ ಮನೆಗೆ ನುಗ್ಗಿ ಚೂರಿಯಿಂದ ಇರಿದು, ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾನೆ.

ಆ ಬಳಿಕ ಆಕೆಯ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಇತ್ತ ಪ್ರಿಯತಮನ ಕೃತ್ಯದಿಂದ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಮೂಡಬಿದ್ರೆ ಆಸ್ಪತ್ರೆಗೆ ದಾಖಲಾಯಿಸತಾದ್ರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.ಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions