Thought of the day :

Tuesday, July 17 , 2018 11:32 AM

ಮಂಗಳೂರು/ಧರ್ಮಸ್ಥಳ:


Sunday, June 24th, 2018 7:05 pm

ಮಂಗಳೂರು/ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿರುವ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲು ಇಂದು ಸಂಜೆ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ಸಿದ್ದರಾಮಯ್ಯ ಅವರು ನಮ್ಮ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಕಾರಣ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲು ಬಂದಿದ್ದೇನೆ, ಇಂದು ರಾತ್ರಿಯೇ ಮರಳಿ ಬೆಂಗಳೂರಿಗೆ ಹೊರಡಲಿದ್ದೇನೆ ಎಂದರು.

Trending stories
State
Health
Tour
Cricket Score
Poll Questions
Sorry, there are no polls available at the moment.