ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಟೆಸ್ಟ್ ಮಾದರಿಯಲ್ಲಿ ವಿಕೆಟ್‌ ಕೀಪಿಂಗ್‌ ಗೆ ಪದಾರ್ಪಣೆ ಮಾಡಿದ್ದ ಭಾರತದ ಬ್ಯಾಟರ್ ಕೆಎಲ್ ರಾಹುಲ್, ಇಂಗ್ಲೆಂಡ್ ವಿರುದ್ಧದ ಭಾರತದ ಐದು ಪಂದ್ಯಗಳ ಸರಣಿಯಲ್ಲಿ ಕೀಪಿಂಗ್ ನಡೆಸುವುದಿಲ್ಲ. ಹೈದರಾಬಾದ್‌ ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ ಗೆ ಎರಡು ದಿನಗಳ ಮುಂಚಿತವಾಗಿ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಈ ನಡೆಯನ್ನು ಖಚಿತಪಡಿಸಿದ್ದಾರೆ.

2023ರ ಏಕದಿನ ವಿಶ್ವಕಪ್‌ ನುದ್ದಕ್ಕೂ ಭಾರತದ ಪರ ವಿಕೆಟ್ ಕೀಪಿಂಗ್ ಮಾಡಿದ ರಾಹುಲ್, ಸರಣಿಯ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಸ್ಪಿನ್ ಬೌಲಿಂಗ್ ವಿರುದ್ಧ ಭಾರತದಲ್ಲಿ ಕೀಪಿಂಗ್ ಮಾಡುವ ಕಾಠಿಣ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕೆಲಸದಿಂದ ದೂರ ಸರಿದಿದ್ದಾರೆ. ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ಇರುವ ಕಾರಣ ರಾಹುಲ್ ಅವರು ವಿಕೆಟ್ ಕೀಪಿಂಗ್ ನಡೆಸುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

Share.
Exit mobile version