ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಜ್ಯ ಸರಕಾರದ 46 ಇಲಾಖೆಗಳಲ್ಲಿ ಖಾಲಿ ಇರುವ 14,771 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ ಮಾಡಲು ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಹೆಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 37 (J) ಅಡಿ ರಾಜ್ಯದ ಸರಕಾರದ 46 ಇಲಾಖೆಗಳಲ್ಲಿ ಖಾಲಿ ಇರುವ 14,771 ಹುದ್ದೆಗಳ ನೇಮಕಾತಿ ಹಾಗೂ ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಹುದ್ದೆಗಳಲ್ಲಿ ಶೇ.8 ರಷ್ಟು ಮೀಸಲಾತಿಯ ಅನುಸಾರ 8,278 ಹುದ್ದೆಗಳಿಗೆ ಮುಂಬಡ್ತಿ ನೀಡಿ ಸರಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.