ಕಲಬುರಗಿ : ಆಕೆ ಕೇಂದ್ರ ಲೋಕ ಸೇವಾ ಆಯೋಗ ನಡೆಸುವ (UPSC) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು. IAS ಅಧಿಕಾರಿಯಾಗುವ ಕನಸು ಕೂಡ ಕಂಡಿದ್ದಳು. ಆದರೆ ಯಾವುದೋ ಒಂದು ಕ್ಷುಲ್ಲಕ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ನಗರದ ಕೋಟನೂರು (ಡಿ) ಬಳಿ ಈ ಒಂದು ಘಟನೆ ನಡೆದಿದೆ. ನಡೆದಿದೆ.
ಹೌದು ಕ್ಷುಲ್ಲಕ ಕಾರಣಕ್ಕೆ ನೇಣು ಬಿಗಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ನಗರದಲ್ಲಿ ನಡೆದಿದೆ. ಆಳಂದ ತಾಲೂಕಿನ ಕೌಲಗ ನಿವಾಸಿ ಪುಷ್ಪ (26) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ ಎಂದು ಹೇಳಲಾಗುತ್ತಿದೆ.
ಮೃತ ಪುಷ್ಪಾ ಕಲಬುರ್ಗಿಯಲ್ಲಿ ಪುಷ್ಪ ಬಾಡಿಗೆ ರೂಂ ಪಡೆದುಕೊಂಡು ವಾಸವಾಗಿದ್ದಳು ಎಂದು ಹೇಳಲಾಗುತ್ತಿದ್ದು, ಮೃತ ಯುವತಿ ಕೇಂದ್ರ ಸರ್ಕಾರ ನಡೆಸುವ ಯುಪಿಎಸ್ಸಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದಳು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ವಿಶ್ವವಿದ್ಯಾಲಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.