ಲೋಕಸಭೆ ಚುನಾವಣೆ ಈ ವರ್ಷವಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಾತ್ರವೇ ಮಂಡಿಸಬಹುದು. ಇದಾದ ಬಳಿಕ, ಮತ್ತೆ ಅಧಿಕಾರಕ್ಕೆ ಬರುವ ಸರ್ಕಾರಕ್ಕೆ ಜೂನ್ ಅಥವಾ ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಅವಕಾಶವಿರುತ್ತದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಸತತ ಆರನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಈ 4 ತಿಂಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಗಮನ ಹರಿಸಲಾಗುತ್ತದೆ. ತೆರಿಗೆ ಹೊರೆಯನ್ನು ಕಡಿಮೆ ಮಾಡಲು ಅಥವಾ ತೆರಿಗೆ ವಿನಾಯಿತಿಗಳನ್ನು ಹೆಚ್ಚಿಸಲು ಬಯಸುತ್ತಿದ್ದಾರೆ.
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ಎಂಜಿಎನ್‌ಆರ್‌ಇಜಿಎ) ಹಣವನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಹಣವನ್ನು ಪಾವತಿಸಲು ಅವರು ಇಚ್ಛಿಸುತ್ತಾರೆ. ಮಹಿಳೆಯರು ಮತ್ತು ಬಡವರ ಪರವಾಗಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. 2024-25ರ ಆರ್ಥಿಕ ವರ್ಷದ ಮೊದಲ 4 ತಿಂಗಳವರೆಗೆ ಕೇಂದ್ರ ಸರ್ಕಾರವು ಸಂಬಳ, ವೇತನ, ಬಡ್ಡಿ ಪಾವತಿ, ಸಾಲ ಸೇವೆ ಇತ್ಯಾದಿಗಳಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ನಿರ್ಮಲಾ ಸೀತಾರಾಮನ್ ಗಣನೆಗೆ ತೆಗೆದುಕೊಂಡಿರುವಂತಿದ್ದು, ಹೀಗಾಗಿ ಮಧ್ಯಂತರ ಬಜೆಟ್ ಮೂಲಕ ಕೇಂದ್ರವು ರೈತರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆಯಾಗಿದೆ.