ತುಮಕೂರು : ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಅಂತ ಒಂದು ಅಹಿಂದ ಟೀಮ್ ಯಾವಾಗಲೂ ಸಹ ಕೆಲಸ ಮಾಡುತ್ತದೆ. ಅಹಿಂದ ಟೀಮ್ ಸಿದ್ದರಾಮಯ್ಯ ಸೇರಿ ಡಿ ಕೆ ಸುರೇಶ್ ಸೋಲಿಸಿದ್ದಾರೆ ಎಂದು ತುಮಕೂರಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದರು.
ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಅಂತ ಹೇಳಿದ್ದೆ. ಇವರೆಲ್ಲರೂ ಡಿಕೆ ಸುರೇಶರನ್ನು ಸೋಲಿಸುತ್ತಾರೆಂದು ಮೊದಲೇ ಹೇಳಿದ್ದೆ. ಒಂದು ತಿಂಗಳ ಹಿಂದೆ ಹೇಳಿದ್ದೆ. ಈಗ ಅದು ರಿಪೀಟ್ ಆಗಿದೆ 2 ಲಕ್ಷ ಮತಗಳ ಅಂತರದಿಂದ ಸುರೇಶರನ್ನು ಸೋಲಿಸುತ್ತಾರೆಂದು ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ ಇದು ಸಂಚಿನ ಒಂದು ಭಾಗ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ ನೀಡಿದರು.
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚುರೂಪಿಸಿದ್ದಾರೆ.ಡಿಕೆ ಶಿವಕುಮಾರ್ ಅವರ ನೈತಿಕತೆ ಕುಸಿಯಬೇಕು ಅಂತ ಡಿಕೆ ಸುರೇಶ್ ಅವರನ್ನು ಸಂಚುರೂಪಿಸಿ ಸೋಲಿಸಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ ಈ ಸರ್ಕಾರವು ಉಳಿಯಲ್ಲ. ರಾಜಕೀಯ ದೃವೀಕರಣ ಶುರುವಾಗುತ್ತೆ. ಕಾಂಗ್ರೆಸ್ ನಲ್ಲಿ ಒಳ ಜಗಳ ಶುರುವಾಗುತ್ತೆ ಈಗಾಗಲೇ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರು ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರ ಸೋಲಿನಿಂದ ಇಲ್ಲೂ ಜಗಳ ಶುರುವಾಗಿದೆ. ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿಕೆ ನೀಡಿದರು.