ಕೊಡಗು: ಮಡಿಕೇರಿ: ಕೊಡಗಿನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆಯಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ.
ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವಿದ್ಯಾಬ್ಯಾಸವನ್ನು ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಪಾಸಾದ ಸಂಭ್ರಮದಿಂದ ಇದ್ದಳು, ತೇರ್ಗಡೆಯಾದ ಖುಷಿಯಲ್ಲಿ ಮನೆಗೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಆಕೆಯನ್ನು ಅಡ್ಡಗಟ್ಟಿ ಕಿರಾತಕನೋರ್ವ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಸೋಮವಾರಪೇಟೆ ಪೊಲೀಸರಿಂದ ಅಪ್ರಾಪ್ತ ಬಾಲಕಿಯ ಎಂಗೆಜ್‌ಮೆಂಟ್ ಮಾಡಲಾಗುವುದು ಎನ್ನುವ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಈ ನಡುವೆ ಆಕೆ ಶಾಲೆಗೆ ಹೋಗಿ ಬರುವ ವೇಳೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗಬೇಕಾಗಿದ್ದ ಯುವಕ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ.