ಬೆಂಗಳೂರು : ಕರ್ನಾಟಕದಲ್ಲಿ ಗೃಹಲಕ್ಷ್ಮಿ ಅನ್ನೋದು ವರದಾನವಾಗಿದೆ. ಮಹಾಲಕ್ಷ್ಮಿ ಸ್ಕೀಮ್ ನಲ್ಲಿ ನಾವು ಒಂದು ಲಕ್ಷ ರೂಪಾಯಿ ಕೊಡುತ್ತೇವೆ.ಮಧ್ಯಮ ವರ್ಗದ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ರೂಪಾಯಿ ಸಿಗುತ್ತದೆ.ಇದಕ್ಕೆ ಕರ್ನಾಟಕದ ಸರ್ಕಾರದ ಗ್ಯಾರಂಟಿ ಯೋಜನೆಗಳು ಉದಾಹರಣೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಧೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪತನದ ಹಾದಿಯಲ್ಲಿದೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದೆ. ಇದು ಭಾರತದ ಜನರ ಮಾತಾಗಿದೆ. ನಿರುದ್ಯೋಗ ಹಾಗೂ ಆರ್ಥಿಕ ದಿವಾಳಿತನ ಸಮಸ್ಯೆಯಾಗಿದೆ.ಬಿಜೆಪಿಯವರು ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುತ್ತಿದ್ದಾರೆ ಎಂದು ರಾಜ್ಯ ಚುನಾವಣೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದರು.
ಬಿಜೆಪಿಯೇತರ ರಾಜ್ಯಗಳ ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ. ಬಿಜೆಪಿ ಆಡಳಿತ ವಿಲ್ಲದ ರಾಜ್ಯಗಳು ರೋಸಿ ಹೋಗಿವೆ.ಸಿದ್ದರಾಮಯ್ಯ ನೇತೃತ್ವ ಸರ್ಕಾರ ಸಹ ಇದೆ ಆರೋಪ ಮಾಡುತ್ತಿದೆ.ಬರದಿಂದ ರಾಜ್ಯ ತತ್ತರಿಸಿದೆ.ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದರು.
ಐದು ತಿಂಗಳಿನಿಂದ ಸರ್ಕಾರ ಕೊಟ್ಟ ಮನವಿಯನ್ನು ಮೂಲೆಗೆ ಹಾಕಿದ್ದಾರೆ.ಚುನಾವಣೆ ವೇಳೆ ಬಂದು ಸುಳ್ಳು ಹೇಳುತ್ತಿದ್ದಾರೆ. ಆದರೆ ಇದನ್ನು ಕನ್ನಡಿಗರು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ.ಬರ ಪರಿಹಾರದಲ್ಲಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ದ್ರೋಹವೆಸಗಿದೆ.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಇದರ ಪರಿಣಾಮ ಗೊತ್ತಾಗಲಿದೆ ಎಂದರು.ಅದೇ ರೀತಿ ಲೋಕಸಭಾ ಚುನಾವಣೆಯ ಬಳಿಕ ಗ್ಯಾರಂಟಿಗಳು ಸಿಗಲಿವೆ.ಈ ಸಲ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಧೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದರು.