ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಡಾ. ಸತ್ಯನಾರಾಯಣ ಹಾಗೂ ಡಾ. ಸುನಿಲ್ ಕಾರಂತ್ ನೇತೃತ್ವದಲ್ಲಿ ಮಾಜಿ ಸಿಎಂ ಎಸ್ಎಂ ಕೃಷ್ಣ ಗೆ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ.
ಏಪ್ರಿಲ್ 22ರಂದು ಎಸ್ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು.ನಂತರ ಕಳೆದ ಏ 29 ರಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.