ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ HD ರೇವಣ್ಣಗೆ ಇಂದು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ರಣದೀಪ ಸಿಂಗ್ ಸುರ್ಜೆವಾಲ ಸಿಎಂ ಸಿದ್ದರಾಮಯ್ಯ ಹಾಗೂ ಡಿಸೆಂಬ ಡಿಕೆ ಶಿವಕುಮಾರ್ ಮಾನಿಟರ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರಿನಲ್ಲಿ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಆಗಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸಿಗರು ನಿತ್ಯ ಪ್ರಕರಣವನ್ನು ಮಾನಿಟರ್ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಾನಿಟರ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ರೇವಣ್ಣಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಪ್ರಕರಣದಲ್ಲಿ ಸರ್ಕಾರ ಆತುರ ತೋರಿದೆ ಎಂದು ಅನಿಸುತ್ತಿದೆ. ಎಫ್ಐಆರ್ ನಲ್ಲಿ ತಪ್ಪು ಮಾಹಿತಿ ನೀಡಿದ್ದು ಸ್ಪಷ್ಟವಾಗಿ ಕಾಣಿಸುತ್ತಿದೆ. ರೇವಣ್ಣರನ್ನು ಜೈಲಿಗೆ ಕಳುಹಿಸಬೇಕೆಂದು ಕುತಂತ್ರ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಕುತಂತ್ರ ಮಾಡಿದ್ದು ಸ್ಪಷ್ಟವಾಗಿ ಕಾಣುತ್ತಿದೆ. ನನ್ನ ಅಪಹರಣ ಮಾಡಿಲ್ಲ ಎಂದು ಸಂತ್ರಸ್ತೇ ಹೇಳುತ್ತಿದ್ದಾರೆ ಎಂದು ತಿಳಿಸಿದರು.