ಹುಬ್ಬಳ್ಳಿ : ಸಿಎಂ ಸ್ನಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಹಲವು ಸ್ವಾಮೀಜಿಗಳು ತಮ್ಮ ವ್ಯಕ್ತಿಕ ಅಭಿಪ್ರಾಯ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಒಂದು ವೇಳೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿಕೆ ನೀಡಿದರು.

ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು 5 ವರ್ಷದವರೆಗೆ ಸಿದ್ದರಾಮಯ್ಯನವರೆ ಮುಖ್ಯಮಂತ್ರಿಯಾಗಿರಬೇಕು. ಸಿದ್ದರಾಮಯ್ಯ ಅವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಎಂದು ಅವರು ತಿಳಿಸಿದರು.

ಕೆಲವು ಸ್ವಾಮೀಜಿಗಳು ಸಿಎಂ ಬದಲಾವಣೆ ಮಾಡಬೇಕು ಎಂದು ಮಾತನಾಡುತ್ತಿದ್ದಾರೆ.ಇಂಥ ಹೇಳಿಕೆಗಳು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು. ಮುಖ್ಯಮಂತ್ರಿ ಬದಲಾವಣೆ ಆಗಬೇಕು ಅಂತ ಸ್ವಾಮೀಜಿಗಳು ಹೇಳಿದ್ದಾರೆ. ಹೀಗಾಗಿ ಅದು ಚಂದ್ರಶೇಖರ ಸ್ವಾಮೀಜಿ ಅವರ ವೈಯಕ್ತಿಕ ಅಭಿಪ್ರಾಯ.

ಮುಖ್ಯಮಂತ್ರಿ ಬದಲಾವಣೆ ಆದರೆ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ಅಹಿಂದ ನಾಯಕರನ್ನು ತುಳಿಯುವ ಕೆಲಸ ನಡಿತಿದ. ಎಂದ ಪ್ರಭುಲಿಂಗ ನಾವು ಸಿಎಂ ಬೆನ್ನೆಲುಬಾಗಿ ನಿಲ್ಲುತ್ತೇವೆ. ಪ್ರತಿ ಜಿಲ್ಲೆಯಲ್ಲಿ ಸಂಘಟನೆ ಮಾಡುತ್ತೇವೆ. ರಾಜ್ಯದ ಜನ ಸಿದ್ದರಾಮಯ್ಯ ಅವರನ್ನು ನೋಡಿ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿಕೆ ನೀಡಿದರು.

ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಚರ್ಚೆ ಮಧ್ಯ ಹುಬ್ಬಳ್ಳಿಯಲ್ಲಿ ಅಹಿಂದ ಪೂರ್ವಭಾವಿ ಸಭೆ ನಡೆಯುತ್ತಿದ್ದು, ಸಿಎಂ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆಗಾಗಿ ಪೂರ್ವಭಾವಿ ಸಭೆ ನಡೆಯುತ್ತಿದೆ. ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬದ ಅಂಗವಾಗಿ ಒಂದು ಸಭೆ ನಡೆಯುತ್ತಿದೆ.ಸಿದ್ದರಾಮಯ್ಯ ‘ಅಹಿಂದ ರತ್ನ’ ಪ್ರಶಸ್ತಿ ಪ್ರಧಾನ ಕುರಿತು ಸಭೆ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ 50 ಸಾಧಕರಿಗೆ ಅಹಿಂದ ರತ್ನ ಪ್ರಶಸ್ತಿ ಪ್ರಧಾನ ಮಾಡೋ ಕುರಿತಾಗಿ ಸಭೆ ನಡೆಸಲಾಗುತ್ತಿದೆ.ಮೊದಲ ಬಾರಿಗೆ ಅಹಿಂದ ರತ್ನ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಹುಟ್ಟು ಹಬ್ಬದ ಅಂಗವಾಗಿ ಈ ಒಂದು ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಈ ಒಂದು ಸಭೆಗೆ ಅಹಿಂದ ಮುಖಂಡರು ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ ಮಾಡಲು ಹಲವು ಮುಖಂಡರು ಒತ್ತಾಯ ಮಾಡಿದ್ದಾರೆ.ಅಭಿಪ್ರಾಯವನ್ನು ಸಂಗ್ರಹಿಸಿ ಸಂಘಟರು ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.

Share.
Exit mobile version