ರಾಮನಗರ: ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸಲು ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ಹಾಗೂ ಕೃಷಿ ಯಂತ್ರಧಾರೆ ಕೇಂದ್ರಗಳೊAದಿಗೆ ಇತರೆ ಸಂಘಸAಸ್ಥೆಗಳು (ಎಫ್ಪಿಓ) ಹಾಗೂ ವೈಯಕ್ತಿಕ ಫಲಾನುಭವಿಗಳಿಗೂ ಸಹ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲಾಗಿದೆ.
ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡಾರ್ ಮಾದರಿಯಲ್ಲಿ ಸ್ಥಾಪಿಸಲಾಗುವುದು. ಈ ಹಬ್ಗಳನ್ನು ಅನುಷ್ಠಾನ ಮಾಡಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾಧಾರ ಸಂಸ್ಥೆಗಳು, ವೈಯಕ್ತಿಕ ಫಲಾನುಭವಿಗಳು ಹಾಗೂ ನೋಂದಾಯಿತ ಸಂಘಸAಸ್ಥೆಗಳು ಭಾಗವಹಿಸಬಹುದಾಗಿದೆ. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ. 50 ರಂತೆ ಪ.ಜಾತಿ/ಪ.ಪಂಗಡದ ರೈತರಿಗೆ ಗರಿಷ್ಠ ಶೇ. 70 ರಷ್ಟು ಸಹಾಯಧನ ನೀಡಲಾಗುವುದು.
ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿಯನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ಅಗತ್ಯವಿರುವ ಆಯ್ಕೆ ಮಾಡಿದ ಯಂತ್ರೋಪಕರಣಗಳಿಗೆ ಅನುಮೋದನೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸುವAತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.