ಶ್ರೀನಗರ: ಇದೀಗ ಆರಂಭಗೊಂಡಿರುವಂತ ಭಾರತ-ಪಾಕಿಸ್ತಾನ ಏಷ್ಯಾಕಪ್ ಕ್ರಿಕೆಟ್ ಪಂದ್ಯವನ್ನು ನೋಡಬಾರದು ಅಥವಾ ಅದಕ್ಕೆ ಸಂಬಂಧಿಸಿದ ಯಾವುದೇ ವಿಷಯವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಬಾರದು ಎಂದು ಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ಐಟಿ) ತನ್ನ ವಿದ್ಯಾರ್ಥಿಗಳಿಗೆ ಸೂಚಿಸಿದೆ.
ಸ್ಟೂಡೆಂಟ್ಸ್ ವೆಲ್ಫೇರ್ ಡೀನ್ ಹೊರಡಿಸಿದ ನೋಟಿಸ್ನಲ್ಲಿ, ಇನ್ಸ್ಟಿಟ್ಯೂಟ್ ಆಡಳಿತವು ಪಂದ್ಯದ ಸಮಯದಲ್ಲಿ ತಮಗೆ ನಿಗದಿಪಡಿಸಿದ ಕೊಠಡಿಗಳಲ್ಲಿ ಉಳಿಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದೆ.
ಕಾಲೇಜಿನ ಆಡಳಿತ ಮಂಡಳಿ ಹೊರಡಿಸಿರುವಂತ ನೋಟಿಸ್ ನಲ್ಲಿ ಭಾರತ ಮತ್ತು ಪಾಕ್ ಪಂದ್ಯದ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ತಮ್ಮ ಕೊಠಡಿಯಲ್ಲಿ ಇರಬೇಕು. ಬೇರೆಯ ಕೊಠಡಿಯ ವಿದ್ಯಾರ್ಥಿಗಳು ಇತರೆ ವಿದ್ಯಾರ್ಥಿಗಳ ಕೊಠಡಿಗೆ ತೆರಳಬಾರದು. ಯಾವುದೇ ಗುಂಪು ಕೂಡ ಸೇರಬಾರದು ಎಂದು ಸೂಚಿಸಿದೆ.
ಭಾರತ ವರ್ಸಸ್ ಪಾಕ್ ಕ್ರಿಕೆಟ್ ಪಂದ್ಯವನ್ನು ಗಂಪುಗೂಡಿ ನೋಡಿದ್ರೇ ಅಂತಹ ಗುಂಪಿನ ವಿದ್ಯಾರ್ಥಿಗಳನ್ನು ಇನ್ಸ್ಟಿಟ್ಯೂಟ್ ಹಾಸ್ಟೆಲ್ ವಸತಿಯಿಂದ ಡಿಬಾರ್ ಮಾಡಲಾಗುತ್ತದೆ. ಇದರಲ್ಲಿ ಭಾಗಿಯಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕನಿಷ್ಠ ₹ 5,000 ದಂಡವನ್ನು ವಿಧಿಸಲಾಗುತ್ತದೆ ಎಂದು ಎನ್ಐಟಿ ಹೇಳಿದೆ.