Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
KARNATAKA

ಬೆಂಗಳೂರಿನ ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಸಾರ್ವಜನಿಕರು ಬಯಸಿದಂತೆ ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.

ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಿದ್ದೇವೆ. ಹಿರಿಯರು ಹಾಗೂ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಮ್ ಮಾಡಲಾಗುವುದು” ಎಂದು ಭರವಸೆ ನೀಡಿದರು.

“ಬೆಂಗಳೂರಿನಲ್ಲಿ ಅವಕಾಶ ಇರುವೆಡೆ ಲಾಲ್ ಬಾಗ್ ಮಾದರಿಯಲ್ಲಿ ಟ್ರೀಪಾರ್ಕ್ ಮಾಡಲು ಅರಣ್ಯ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ. ಅದಕ್ಕೆ ಆರ್ಥಿಕ ಬೆಂಬಲವನ್ನು ನೀಡಲಾಗುವುದು” ಎಂದು ತಿಳಿಸಿದರು.

“ಇಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯರು ಹಾಗೂ ಆಂಬುಲೆನ್ಸ್ ಸೇವೆ ನಿಯೋಜನೆಗೆ ತೀರ್ಮಾನಿಸಿದ್ದೇವೆ. ಇನ್ನು ಮುಂದೆ ಇಲ್ಲಿನ ಶೌಚಾಲಯಗಳ ಸೌಲಭ್ಯವನ್ನು ಉಚಿತವಾಗಿ ಒದಗಿಸಲಾಗುವುದು.ಬೆಂಗಳೂರಿನ ಕಸ ವಿಲೇವಾರಿ, ವಾಹನ ನಿಲುಗಡೆ, ಸೇರಿದಂತೆ ಅನೇಕ ವಿಚಾರವಾಗಿ ಸಲಹೆ, ಅಭಿಪ್ರಾಯಗಳು ಬಂದಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಟನಲ್ ರಸ್ತೆಗೆ ಲಾಲ್ ಬಾಗ್ ನ 6 ಎಕರೆ ಭೂಮಿ ಅಗತ್ಯವಿಲ್ಲ

“ಲಾಲ್ ಬಾಗ್ ಸಾರ್ವಜನಿಕರ ಆಸ್ತಿ. ಈ ಸಾರ್ವಜನಿಕರ ಆಸ್ತಿ ಉಳಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಆರು ಎಕರೆ ಭೂಮಿ ವಶಪಡಿಸಿಕೊಳ್ಳುವ ಅಗತ್ಯವಿಲ್ಲ. ಅರ್ಧ ಎಕರೆ ಪ್ರದೇಶದಲ್ಲಿ ಅಶೋಕ ಪಿಲ್ಲರ್ ಕಡೆ ಟನಲ್ ರಸ್ತೆಗೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ಕಲ್ಪಿಸಲಾಗುವುದು. ಪಾರ್ಕಿಂಗ್ ಗಾಗಿ ಇರುವ ಜಾಗದಲ್ಲಿ ಸುಮಾರು ಒಂದು ಎಕರೆ ಜಾಗವನ್ನು ಸ್ಟೋರೇಜ್ ಗೆ ಬಳಸಿಕೊಳ್ಳುತ್ತೇವೆ. ನಂತರ ಅದನ್ನು ತೆರವುಗೊಳಿಸಿ ಲಾಲ್ ಬಾಗ್ ಗೆ ಕೊಡುತ್ತೇವೆ. ಸಣ್ಣದಾಗಿರುವ ಗಿಡಗಳನ್ನು ತೆರವುಗೊಳಿಸಿ, ಮತ್ತೆ ಗಿಡ ನೆಡುತ್ತೇವೆ. ಉಳಿದಂತೆ ಲಾಲ್ ಬಾಗ್ ಉದ್ಯಾನಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಈ ಯೋಜನೆ ಆರಂಭ ಯಾವಾಗ ಎಂದು ಕೇಳಿದಾಗ, “ನಾವು ಯೋಜನೆಯ ಟೆಂಡರ್ ಕರೆಯಲಾಗಿದೆ. ಬಿಡ್ ನಲ್ಲಿ ಯಾರು ಭಾಗವಹಿಸುತ್ತಾರೆ ಎಂದು ನೋಡಿ, ನಂತರ ಅತ್ಯುತ್ತಮ ಬಿಡ್ ಮಾಡಿದವರಿಗೆ ನೀಡಲಾಗುವುದು” ಎಂದು ತಿಳಿಸಿದರು.

ಮುಂದಿನ ದಿನಗಳಲ್ಲೂ ಉದ್ಯಾನಗಳಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಮುಂದುವರಿಸುತ್ತೀರಾ ಎಂದು ಕೇಳಿದಾಗ, “ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಭಿಪ್ರಾಯ, ಸಲಹೆ, ಅಹವಾಲು ಆಲಿಸಲಾಗುವುದು” ಎಂದು ತಿಳಿಸಿದರು.

ಜನರು ಬೆಂಗಳೂರಿನ ಕಸದ ಸಮಸ್ಯೆ ಬಗ್ಗೆ ನಿಮ್ಮ ಬಳಿ ಚರ್ಚಿಸಿದ್ದಾರೆ ಎಂದು ಕೇಳಿದಾಗ, “ಈ ವಿಚಾರವಾಗಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು, ಎಲ್ಲೆಲ್ಲಿ ಬ್ಲಾಕ್ ಸ್ಪಾಟ್ ಇದೆಯೋ ಅಲ್ಲಿ ಕ್ಯಾಮೆರಾ ಅಳವಡಿಸಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯ

ಜಿಬಿಎ ವಿಚಾರದಲ್ಲಿ ಬಿಜೆಪಿಯವರ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರಿಗೆ ಬೆಂಗಳೂರು ಅಭಿವೃದ್ಧಿ ಮುಖ್ಯವಲ್ಲ, ರಾಜಕೀಯವೇ ಮುಖ್ಯ. ಅವರು ಜಿಬಿಎ ಸಮಿತಿ ಸಭೆಯಲ್ಲಿ ತಮ್ಮ ಅಭಿಪ್ರಾಯ, ಸಲಹೆ, ದೂರು ಹೇಳಿಕೊಳ್ಳಬಹುದಾಗಿತ್ತು. ಜನ ಅವರನ್ನು ಗೆಲ್ಲಿಸಿ ಅಧಿಕಾರ ನೀಡಿದ್ದು, ಆ ಜನರ ಧ್ವನಿಯಾಗಬೇಕಿತ್ತು. ಆದರೆ ಆ ಕೆಲಸ ಮಾಡಲಿಲ್ಲ. ಬದಲಿಗೆ ಜಿಬಿಎ ರದ್ದು ಮಾಡುವುದಾಗಿ ಹೇಳಿದ್ದಾರೆ. ಅದು ಅವರಿಗೆ ಬಿಟ್ಟ ವಿಚಾರ. ಇದುವರೆಗೂ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಯೋಜನೆ, ತೀರ್ಮಾನಗಳನ್ನು ಯಾವುದೇ ಸರ್ಕಾರ ಬದಲಿಸಲು ಸಾಧ್ಯವಾಗಿಲ್ಲ. ನಮ್ಮ ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿ ಜನಪರ ತೀರ್ಮಾನ ಮಾಡುತ್ತೇವೆ. ಮುಂದೆ ಅವರ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಹೀಗಾಗಿ ಅವರು ಈ ಆಲೋಚನೆ ಮಾಡುವುದು ಬೇಡ. ಅವರು ಜಿಬಿಎ ವಿರೋಧಿಸುವುದೇ ಆದರೆ ಪಾಲಿಕೆ ಚುನಾವಣೆ ಬಹಿಷ್ಕರಿಸಲಿ. ಮೇಯರ್ ಅಧಿಕಾರ ಅವಧಿಯನ್ನು ನಾವು ಎರಡೂವರೇ ವರ್ಷಕ್ಕೆ ವಿಸ್ತರಿಸಿದ್ದೇವೆ. ಇನ್ನು ವಾರ್ಡ್ ಸಮಿತಿಗಳಲ್ಲಿ ಐದು ಸಾವಿರ ಸದಸ್ಯರು ಇರುತ್ತಾರೆ. 369 ಪಾಲಿಕೆ ಪ್ರತಿನಿಧಿಗಳು ಆಯ್ಕೆಯಾಗುತ್ತಾರೆ. ಇದರಲ್ಲಿ 50% ಮಹಿಳೆಯರು ಇರುತ್ತಾರೆ” ಎಂದರು.

ಸರ್ಜಾಪುರದಲ್ಲಿ ಭಾರಿ ಮಳೆಯಿಂದ ರೈನ್ ಬೋ ಬಡಾವಣೆಗೆ ತೊಂದರೆಯಾಗಿದೆ ಎಂದು ಕೇಳಿದಾಗ, “ಅಧಿಕಾರಿಗಳ ಬಳಿ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಗಾಳಿ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಅಧಿಕಾರವೂ ಇಲ್ಲ. ಮಾಧ್ಯಮಗಳು ಗಾಳಿ ಸುದ್ದಿ ಪ್ರಕಟಿಸುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿಗಳು ಅಥವಾ ನಾನು ಪ್ರಸ್ತಾವನೆ ಮಾಡಬೇಕು. ನಾವಿಬ್ಬರೂ ಪ್ರಸ್ತಾಪ ಮಾಡಲಿಲ್ಲವಾದರೆ ಅದು ಗಾಳಿ ಸುದ್ದಿ. ಆತುರದಲ್ಲಿರುವವರು, ಮಾಧ್ಯಮಗಳ ಮುಂದೆ ಮಾತನಾಡುತ್ತಾರೆ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು.

ಸಿಎಂ ಸಭೆ ಬಗ್ಗೆ ಕೇಳಿದಾಗ, “ಮುಂದೆ ಪಾಲಿಕೆಗಳು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಾರೆ. ನಾನು ಕೂಡ ಇಂದು ಜಿಬಿಎ ಪಾಲಿಕೆಗಳ ಚುನಾವಣೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ” ಎಂದು ತಿಳಿಸಿದರು.

ಪಾಲಿಕೆಗಳಲ್ಲಿ ಸಿಬ್ಬಂದಿ ಹಾಗೂ ಕಟ್ಟಡ ಸಮಸ್ಯೆ ಬಗ್ಗೆ ಕೇಳಿದಾಗ, “ಈ ಎಲ್ಲಾ ವ್ಯವಸ್ಥೆ ಮಾಡಲಾಗುವುದು. ಕಟ್ಟಡ ನಿರ್ಮಾಣಕ್ಕೆ ಜಾಗಗಳು ಗುರುತಿಸಲಾಗಿದ್ದು, 2 ವರ್ಷದಲ್ಲಿ ನಿರ್ಮಾಣ ಮಾಡುತ್ತೇವೆ. ಅಲ್ಲಿಯವರೆಗೂ ಬಾಡಿಗೆ ಕಟ್ಟಡದಲ್ಲಾದರೂ ವ್ಯವಸ್ಥೆ ಮಾಡುತ್ತೇವೆ” ಎಂದು ತಿಳಿಸಿದರು.

BIG NEWS: ಪ್ರಿಯಕರನ ಜೊತೆ ಓಡಿ ಹೋದ ಪುತ್ರಿ: ಶೃದ್ದಾಂಜಲಿ ಬ್ಯಾನರ್​ ಹಾಕಿ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.