ಹೈದರಾಬಾದ್ : ಆನ್ಲೈನ್ ಗೇಮ್ ಪಬ್ಜಿ ಚಟಕ್ಕೆ ಬಿದ್ದು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ನ ಪಂಜಾಗುಟ್ಟ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಮ್ಮ ಐ ಲವ್ ಯೂ….ಹುಷಾರಾಗಿರು ಎಂದು ವಾಟ್ಸ್ಆ್ಯಪ್ನಲ್ಲಿ ಅವರ ತಾಯಿಗೆ ಮೆಸೇಜ್ ಮಾಡಿ ಅಖಿಲ್ (21) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಅಖಿಲ್ ತಂದೆ ಮರಣಹೊಂದಿದ ನಂತರ ತಾಯಿ ಜೊತೆ ಸೇರಿ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಅಮೀರ್ಪೇಟ್ ಸಮೀಪದ ಸಿದಾರ್ಥ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಾಂಗ ಮಾಡುತ್ತಿದ್ದ. ಕಳೆದ ಮೂರು ತಿಂಗಳಿನಿಂದ ಕಾಲೇಜಿಗೂ ಹೋಗದೆ ಪಬ್ಜಿಗೆ ಜೋತು ಬಿದ್ದು ಹಗಲು ರಾತ್ರಿ ಗೇಮ್ ಆಡುತ್ತಿದ್ದ. ಕುಟುಂಬದವರು ಬುದ್ಧಿಮಾತು ಹೇಳಿದರೂ ಕೇಳದ ಅಖಿಲ್ ಆಟಕ್ಕಾಗಿ ಊಟ ಬಿಟ್ಟು ಪಬ್ಜಿ ಗೇಮ್ನಲ್ಲಿ ನಿರತನಾಗಿದ್ದ. ಕೊನೆಗೆ ಪಬ್ಜಿ ಆಟವೇ ಆತನ ಜೀವಕ್ಕೆ ಮುಳುವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಖಿಲ್ ತಾಯಿ ಪಿ. ಜಯ ತನ್ನ ಗೆಳತಿ ಮನೆಗೆ ಹೋಗಿದ್ದಳು. ಮನೆಯಲ್ಲಿ ಇದ್ದ ಅಖಿಲ್ ಅಮ್ಮ ಐ ಲವ್ ಯೂ….ಮಿಸ್ ಜೋಪಾನ ಎಂದು ಮೆಸೇಜ್ ಮಾಡಿದ್ದ, ಈ ಮೆಸೇಜ್ ನೋಡಿದ ತಾಯಿ ಮನೆಗೆ ಬಂದು ಬಾಗಿಲು ಬಂದ್ ಆಗಿರುವುದನ್ನು ಕಂಡು ಬಾಗಿಲು ತೆರೆಯುವಂತೆ ಮಗನನ್ನು ಕೂಗಿದ್ದಾರೆ. ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಎಷ್ಟೋತ್ತಾದರೂ ಪ್ರತಿಕ್ರಿಯೆ ಬಾರದಿದ್ದಾಗ ಅಕ್ಕಪಕ್ಕದ ಮನೆಯವರ ನೆರವಿನಿಂದ ಬಾಗಿಲು ಒಡೆದು ನೋಡಿದ್ದಾರೆ, ಮಗ ನೇಣು ಬಿಗಿದುಕೊಂಡು ಸಾವುಗೀಡಾಗಿರುವುದನ್ನು ನೋಡಿ ತಾಯಿ ಕುಸಿದು ಬಿದ್ದಿದ್ದಾಳೆ.
ಪಬ್ಜಿಯಂತಹ ಆನ್ಲೈನ್ ಗೇಮ್ಗಳಿಂದ ಅಮಾಯಕ ಯುವಕರು, ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಪಬ್ಜಿಯಂತಹ ಆನ್ಲೈನ್ ಗೇಮ್ಗಳನ್ನು ಕೂಡಲೇ ಬ್ಯಾನ್ ಮಾಡಬೇಕು ಎಂದು ಮೃತನ ತಾಯಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆಯಾಗಿದೆ.