ನವದೆಹಲಿ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ: ಬಿಜೆಪಿ ಮುಖಂಡ ಪೆಮಾ ಖಂಡು ಅವರು ಸತತ ಮೂರನೇ ಬಾರಿಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ನಡೆದ ಸಭೆಯಲ್ಲಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಬುಧವಾರ ಇಟಾನಗರಕ್ಕೆ ಆಗಮಿಸಿದರು. ಖಂಡು 2016 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು.

 

 

Share.
Exit mobile version