ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಬೆಂಗಳೂರಿನ ಸೆಷನ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ FIR ಅಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ? ನೀವು ವಿಚಾರಣಾ ನ್ಯಾಯಾಲಯದಲ್ಲಿ ನೆರವಾಗಿ ಹಾಜರಾಗಬಹುದಿತ್ತಲ್ಲ? ಎಂದು ಶಾಸಕ ಎಚ್ ಡಿ ರೇವಣ್ಣ ಪರ ಹಿರಿಯವ ವಕೀಲರಿಗೆ ವಿಶೇಷ ಕೋರ್ಟ್ ನ ಜಡ್ಜ್ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದೆ.

ಈ ವೇಳೆ HD ರೇವಣ್ಣ ಪರ ಹಿರಿಯ ವಕೀಲರು ವಾದ ಮಂಡಿಸಿ ಎಫ್ಐಆರ್ ನಲ್ಲಿ ಜಾಮೀನು ನೀಡಬೇಕಾದಂತಹ ಆರೋಪಗಳಿವೆ.ಆದರೆ ಮ್ಯಾಜಿಸ್ಟ್ರೇಟಿಗೆ ಅತ್ಯಾಚಾರ ಆರೋಪ ಸೇರಿಸಲು ಅರ್ಜಿ ನೀಡಲಾಗಿದೆ.ಇದಕ್ಕೆ ಪೂರಕವಾಗಿ HD ರೇವಣ್ಣ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಎಚ್ ಡಿ ರೇವಣ್ಣ ಪರ ಹಿರಿಯ ಮೂರ್ತಿ ಡಿ ನಾಯಕ್ ವಾದ ಮಂಡಿಸಿದರು.

ಎಸ್ಐಟಿ ಸಲ್ಲಿಸಿದ ಅರ್ಜಿಯವರ ಇನ್ನೂ ಲಭ್ಯವಾಗಿಲ್ಲ. ಮಧ್ಯಂತರ ಜಾಮೀನು ನೀಡಲು ಎಚ್ಡಿ ರೇವಣ್ಣ ಪರ ವಕೀಲರು ಮನವಿ ಮಾಡಿದರು.ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿತು. ನಿರೀಕ್ಷಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಶೇಷ ಕೋರ್ಟಿನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ನೀಡಿದರು.

Share.
Exit mobile version